ಸಾಗರಮಾಲಾ ಯೋಜನೆ ವಿರೋಧಿಸಿದ ಮೀನುಗಾರರು ಪೊಲೀಸ್ ವಶಕ್ಕೆ
ಕಾರವಾರ, ಜ. 13 ಸಾಗರಮಾಲಾ ಯೋಜನೆಯಡಿ ವಾಣಿಜ್ಯ ಬಂದರಿನ ವಿಸ್ತರಣೆ ಕಾಮಗಾರಿ ಆರಂಭವಾಗಿದ್ದು, ಇದಕ್ಕೆ ವಿರೋಧಿಸಿ ಮೀನುಗಾರರು ಇಂದು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು 20ಕ್ಕೂ ಹೆಚ್ಚು ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೀನುಗಾರರು ಹಾಗೂ ಸ್ಥಳೀಯರ ವಿರೋಧದ ನಡುವೆಯೂ ಸೋಮವಾರದಿಂದಲೇ ಮತ್ತೆ ಕಾಮಗಾರಿ ವಿಸ್ತರಣೆ ಆರಂಭಗೊಂಡಿದ್ದು,ಈ ಪ್ರದೇಶದ ಸುತ್ತ ಮುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಅಳವಡಿಸಿ, ಸಾರ್ವಜನಿಕರು ಒಳ ಪ್ರವೇಶಿಸದಂತೆ ನಿರ್ಬಂಧಿಸಿದ್ದಾರೆ.ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.ಯೋಜನೆಯ ಭಾಗವಾಗಿ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿರುವ ಮಕ್ಕಳ ಉದ್ಯಾನದ ಸಮೀಪದಲ್ಲಿ ಸುಮಾರು 800 ಮೀಟರ್ ಉದ್ದದ ಅಲೆ ತಡೆಗೋಡೆ ನಿರ್ಮಾಣವಾಗಲಿದ್ದು, ಇದರಿಂದ ಮೀನುಗಾರಿಕಾ ದೋಣಿಗಳ ಸಂಚಾರಕ್ಕೆ ತೊಂದರೆಯಾಗಲಿದೆ. ಅಲ್ಲದೇ, ವಾಣಿಜ್ಯ ಬಂದರಿನ ವಿಸ್ತರಣೆಯಿಂದ ಮೀನುಗಾರಿಕಾ ಉದ್ಯಮಕ್ಕೆ ಪೆಟ್ಟು ಬೀಳಲಿದ್ದು, ಕಾರವಾರದ ಏಕೈಕ ಕಡಲತೀರಕ್ಕೆ ಮತ್ತು ನಗರ ಸೌಂದರ್ಯಕ್ಕೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿ ಮೀನುಗಾರರು ಕಾಮಗಾರಿಯನ್ನು ವಿರೋಧಿಸುತ್ತಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರರು ಕಾಮಗಾರಿ ವಿರೋಧಿಸಿ ಪ್ರತಿಭಟನೆ ನಡೆಸಿದಾಗ, ಮೀನುಗಾರಿಕಾ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು.ಈ ಸಂದರ್ಭದಲ್ಲು ಸಚಿವರು ಮೀನುಗಾರರ ಎಲ್ಲಾ ಆತಂಕಗಳನ್ನೂ ನಿವಾರಿಸಿ, ತೊಂದರೆಯಾಗದಂತೆ ನೋಡಿಕೊಳ್ಳುವುದಾಗಿ ಸಭೆಯಲ್ಲಿ ಭರವಸೆ ನೀಡಿದ್ದರು. ಯೋಜನೆಯನ್ನು ವಿರೋಧಿಸಿ ಭಾನುವಾರ ಸಂಜೆ ಟ್ಯಾಗೋರ್ ಕಡಲತೀರದಲ್ಲಿ ಮೀನುಗಾರರು ಹಾಗೂ ನೂರಾರು ಸ್ಥಳೀಯರು ಸುಮಾರು ಎರಡು ಕಿಲೋಮೀಟರ್ ಉದ್ದದ ಮಾನವ ಸರಪಳಿ ರಚಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 