ಅಮೂಲ್ಯ ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ
ಬೆಂಗಳೂರು, ಫೆ. 26, ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯಾನ್ಳನ್ನು ನ್ಯಾಯಾಲಯ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿದೆ.ಇತ್ತೀಚೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆದ ಸಿಎಎ ವಿರೋಧಿ ಸಮಾವೇಶದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಎಂದಿದ್ದ ಅಮೂಲ್ಯಳನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ಪಡೆದು, ರಾತ್ರೋರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಆಕೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಇದೀಗ ಈ ಪ್ರಕರಣದ ಬಗ್ಗೆ ಹೆಚ್ಚಿನ ವಿಚಾರಣೆಗಾಗಿ ಆಕೆಯನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಅಮೂಲ್ಯಳನ್ನು ಮಂಗಳವಾರ ರಾತ್ರಿ 8 ಗಂಟೆಗೆ 5ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನಂತರ ಆಕೆಯನ್ನು ಆಕೆಯನ್ನು 4 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 