ಇಬ್ಬರು ರೌಡಿಗಳಿಗೆ ಗಡಿಪಾರು ಆದೇಶ ಮಾಡಿದ ಪೋಲಿಸರು
Police issue deportation order to two rowdies
ಲೋಕದರ್ಶನ ವರದಿ
ಯಮಕನಮರಡಿ 05: ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಪೋಲಿಸ್ ಠಾಣೆ ವ್ಯಾಪ್ತಿಯ ಇಂಗಳಿ ಮತ್ತು ಠಾಣಾ ಹತ್ತರಗಿ ಗ್ರಾಮದ ಇಬ್ಬರು ಪುಡಿ ರೌಡಿಗಳಿಗೆ ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅವರು ಆದೇಶ ಮಾಡಿದ್ದಾರೆ.
ಇತ್ತೀಚಿನ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದ ಕೊಲೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತ ಕೆಲಸ ಮಾಡುತ್ತಿದ್ದ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದ ಲಾಡಜಿಸಾಬ ಗಜಬರಸಾಬ ಮುಲ್ತಾನಿ ಇತನಿಗೆ ಬಾಗಲಕೋಟ ಜಿಲ್ಲೆಯ ಜಮಖಂಡಿ ತಾಲೂಕಿನ ಸಾವಳಗಿ ಪೋಲಿಸ್ ಠಾಣೆ ವ್ಯಾಪ್ತಿಗೆ ದಿ. 28 - 4 - 2026 ರಂದು ಮತ್ತು ಹತ್ತರಗಿ ಗ್ರಾಮದ ಆನಂದಪೂರ ನಗರದ ಪಾರಿಷ ಉರ್ಫ ಪ್ರಶಾಂತ ಸುರೇಶ ನಾಶಿಪುಡಿ ಇತನಿಗೆ ಧಾರವಾಡ ಉಪ ನಗರ ಪೋಲಿಸ್ ಠಾಣೆ ವ್ಯಾಪ್ತಿಗೆ ದಿ. 30 - 4 - 2026 ರಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಈ ಇಬ್ಬರು ಹುಕ್ಕೇರಿ ತಾಲೂಕಿನ ಯಮಕನಮರ್ಡಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳ ಕುರಿತು ಪೋಲಿಸ್ ಇನ್ಸಪೇಕ್ಟರ ಜಾವಿದ ಮುಷಾಪುರಿ ನೀಡಿದ ವರದಿಯನ್ನು ಆಧರಿಸಿ ಬೆಳಗಾವಿ ಜಿಲ್ಲಾ ಪೋಲಿಸ್ ವರಿಷ್ಠಾಧೀಕಾರಿ ಕೆ ರಾಮರಾಜನ ಗಡಿಪಾರು ಆದೇಶ ಹೊರಡಿಸಿದ್ದಾರೆ.
ಯಮಕನಮರ್ಡಿ ಪೋಲಿಸ್ ಇನ್ಸಪೇಕ್ಟರ ಜಾವಿದ ಮುಷಾಪೀರಿ ರವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಪ್ರಶಂಸೆಗಳು ವ್ಯಕ್ತವಾಗುತ್ತಿವೆ. ಹಾಗೂ ಪುಡಿ ರೌಡಿಗಳಿಗೆ ಸಿಂಹ ಸ್ವಪ್ನ ವಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 