ಉಗ್ರರ ಜೊತೆ ಪೊಲೀಸ್ ಅಧಿಕಾರಿ ಬಂಧನ
ಶ್ರೀನಗರ, ಜ12 : ಜಮ್ಮು ಕಾಶ್ಮೀರ ಪೊಲೀಸರು ಇದೆ ಮೊದಲ ಭಾರಿಗೆ ಹಿರಿಯ ಪೊಲೀಸ್ ಅಧಿಕಾರಿ ಸೇರಿದಂತೆ ಇಬ್ಬರು ಉಗ್ರರನ್ನು ಕುಲ್ಗಾಂ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.
ಶ್ರೀನಗರದ ಬಳಿಯಿರುವ ಪೊಲೀಸ್ ಅಧಿಕಾರಿಯ ಮನೆ ಮೇಲೆ ದಾಳಿ ಮಾಡಿ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪೊಲೀಸ್ ಮತ್ತು ಸೇನೆಯ ಜಂಟಿ ಕಾರ್ಯಾಚರಣೆ ಸಮಯದಲ್ಲಿ ಮೀರ್ ಬಜಾರ್ ರಾಷ್ಟ್ರೀಯ ಹೆದ್ದಾರಿಯ ಬಳಿ ವಾಹನವೊಂದರಲ್ಲಿದ್ದ ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಇಬ್ಬರು ಉಗ್ರರರನ್ನು ಬಂಧಿಸಿ ಅವರಿಂದ 5 ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ದೇಶದಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಉಗ್ರರೊಂದಿಗೆ ಬಂಧಿತರಾದ ಮೊದಲ ಘಟನೆ ಇದಾಗಿದೆ. ಈ ಪೊಲೀಸ್ ಅಧಿಕಾರಿ ಕಳೆದ ಬಾರಿ ರಾಷ್ಟ್ರಪತಿ ಪದಕ ವಿಜೇತರಾಗಿದ್ದರು ಎಂದೂ ವರದಿಯಾಗಿದೆ.
ಬಂಧಿತ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಸೈಯದ್ ನವೀದ್ ಬಾಬಾ ದಕ್ಷಿಣ ಕಾಶ್ಮೀರದ ಮೋಸ್ಟ್ ವಾಂಟೆಡ್ ಉಗ್ರರಲ್ಲಿ ಒಬ್ಬನಾಗಿದ್ದು, ಮತ್ತೊಬ್ಬ ಉಗ್ರನನ್ನು ಆಸಿಫ್ ರಥರ್ ಎಂದೂ ಗುರುತಿಸಲಾಗಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 