ಓವರ್ಲೋಡ್ ಟಿಪ್ಪರ್, ಲಾರಿಗಳ ಸಂಚಾರಕ್ಕೆ ಬ್ರೇಕ್ ಹಾಕಿದ ಪೊಲೀಸರು
Police put a stop to the movement of overloaded tippers and lorries
ಲಕ್ಷ್ಮೇಶ್ವರ, ಜು.11: ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಓವರ್ಲೋಡ್ ಟಿಪ್ಪರ್ ಹಾಗೂ ಲಾರಿಗಳ ಸಂಚಾರ ಹೆಚ್ಚಾಗಿದ್ದು, ಇದರಿಂದ ರಸ್ತೆಗಳು ಹಾಳಾಗುತ್ತಿವೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು.
ಈ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ಪೊಲೀಸ್ ಠಾಣೆಯ ಸಿಪಿಐ ಬಿ.ವಿ. ನಾಮೇಗೌಡ ಹಾಗೂ ಪಿಎಸ್ಐ ನಾಗರಾಜ ಗಡದ ಅವರ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಓವರ್ಲೋಡ್ ಹೊತ್ತು ಸಂಚರಿಸುತ್ತಿದ್ದ ಟಿಪ್ಪರ್ ಮತ್ತು ಲಾರಿಗಳನ್ನು ತಡೆದು ಪರೀಶೀಲನೆ ನಡೆಸಿದರು.
ಕಾರ್ಯಾಚರಣೆಯ ವೇಳೆ ಮಣ್ಣು, ಜಲ್ಲಿ, ಮರಳು ಸೇರಿದಂತೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಸರಕು ಸಾಗಿಸುತ್ತಿದ್ದ ಹಲವು ವಾಹನಗಳನ್ನು ವಶಕ್ಕೆ ಪಡೆದು, ಸಂಬಂಧಿಸಿದ ವಾಹನಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಈ ಕಾರ್ಯಾಚರಣೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇಂತಹ ಕ್ರಮಗಳನ್ನು ನಿರಂತರವಾಗಿ ಮುಂದುವರಿಸುವಂತೆ ಆಗ್ರಹಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 