ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮೇಲೆ ಪೊಲೀಸರ ದಾಳಿ ಅಕ್ಕಿ ವಶ
Police raid illegal ration rice shipment, rice seized
ಲೋಕದರ್ಶನ ವರದಿ
ಕಂಪ್ಲಿ 22 : ತಾಲೂಕಿನ ನೆಲ್ಲುಡಿ-ಕೊಟ್ಟಾಲ್ ಗ್ರಾಮದ ದೊಡ್ಡ ಕಾಲುವೆ ಹತ್ತಿರ ಮಿನಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣೆ ಮಾಡುವುದನ್ನು ತಡೆದು, ಪೊಲೀಸರು 17.460 ಟನ್ ಅಕ್ಕಿ ವಶಕ್ಕೆ ಪಡಿಸಿಕೊಂಡಿದ್ದಾರೆ.ಕಂಪ್ಲಿ ತಾಲೂಕು ವ್ಯಾಪ್ತಿಯ ಹಾಗೂ ಕುರುಗೋಡು ಪೊಲೀಸ್ ಠಾಣಾ ಸರಹದ್ದಿನಲ್ಲಿ ಆಂದ್ರ್ರದೇಶದ ಆದೋನಿಯ ಶೇಕ್ಷಾವಲಿ, ಮಾನ್ವಿಯ ವಿನೋದ್. ಹಾಲದಾಳ್ ವೀರಭದ್ರ ಇವರು ಆಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದರು ಎನ್ನಲಾಗಿದೆ. ಕುರುಗೋಡು ಪೊಲೀಸ್ ಠಾಣೆಯ ಪಿ.ಎಸ್.ಐ ಸುಪ್ರೀತ್.ವಿ. ಸಿಬ್ಬಂದ ವಿಜಯಕುಮಾರ್, ರಾಜಶೇಖರ್, ಆಂಜಿನಿ ಹಾಗೂ ಫುಡ್ ಇನ್ಸ್ ಫೆಕ್ಟರ್ ಬಿ.ವಿರುಪಾಕ್ಷ ಗೌಡ ಇವರು ಜಂಟಿಯಾಗಿ ದಾಳಿ ಮಾಡಿದ್ದರು. ರೂ 87300 ರೂ ಮೌಲ್ಯದ ಅಕ್ಕಿ ಜೊತೆ 3 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 