ಪೊಲೀಸರು ಸತ್ಯ, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಮುಂದಾಗಿ: ಡಿ. ದೇವರಾಜ
Police should come forward to discharge their duties honestly, with truth and dedication: D. Devaraj
ಲೋಕದರ್ಶನ ವರದಿ
ಧಾರವಾಡ 17: ಪೊಲೀಸರು ತಮ್ಮ ಕರ್ತವ್ಯವನ್ನು ಶಿಸ್ತು ಬದ್ಧವಾಗಿ ಶ್ರದ್ದೆಯಿಂದ ಮಾಡಬೇಕು. ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರು ಸಮವಸ್ತ್ರ ಹಾಗೂ ತಾವು ಮಾಡುವ ಕೆಲಸದ ಬಗ್ಗೆ ಹೆಮ್ಮೆ ಹೊಂದಿರಬೇಕು.
ಪೊಲೀಸರು ಸತ್ಯ, ನಿಷ್ಠೆಯಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದು ಬೆಂಗಳೂರಿನ ತರಬೇತಿ ಪೊಲೀಸ್ ಉಪ ಮಹಾನೀರಿಕ್ಷಕರಾದ ಡಿ. ದೇವರಾಜ ಅವರು ಹೇಳಿದರು.
ಅವರು ಇಂದು (ಜು.17) ಬೆಳಿಗ್ಗೆ ನಗರದ ಡಿ.ಎ.ಆರ್. ಪೊಲೀಸ್ ಕವಾಯತು ಮೈದಾನದಲ್ಲಿ ಜರುಗಿದ 24ನೇ ತಂಡದ ಸಶಸ್ತ್ರ ಪೊಲೀಸ್ ಕಾನ್‌ಸ್ಟೇಬಲ್‌ಗಳ ನಿರ್ಗಮನ ಪಥ ಸಂಚಲನದ ಕಾರ್ಯಕ್ರಮದಲ್ಲಿ ಪೊಲೀಸ್ ಪ್ರಶಿಕ್ಷಣಾರ್ಥಿ ತಂಡಗಳ ಪಥಸಂಚಲನ ವೀಕ್ಷಣೆ ಮಾಡಿ, ಮಾತನಾಡಿದರು.
ಕ್ರಿಮಿನಲ್‌ಗಳ ಜೊತೆ ಪೊಲೀಸ್ ಒಡನಾಟವು ವೈಯಕ್ತಿಕವಾಗಿ ಇರಬಾರದು. ಕೈದಿಗಳನ್ನು ಜೈಲಿನಿಂದ ನ್ಯಾಯಾಲಯಕ್ಕೆ, ಒಂದು ಜೈಲಿನಿಂದ ಮತ್ತೊಂದು ಜೈಲಿಗೆ ಅಥವಾ ಆಸ್ಪತ್ರೆಗೆ ಸುರಕ್ಷಿತವಾಗಿ ಕರೆದೊಯ್ಯುವ ಮತ್ತು ಮರಳಿ ಕರೆತರುವ ಜವಾಬ್ದಾರಿಯನ್ನು ಮಾತ್ರ ನಿರ್ವಹಿಸಬೇಕು. ವೈಯಕ್ತಿಕ ಜೀವನದ ಬಗ್ಗೆ ಸಂಭಾಷಣೆ ಮಾಡಬಾರದು ಎಂದು ಅವರು ಹೇಳಿದರು.
ನಾನು ಪೊಲೀಸ್ ಎಂಬ ಹೆಮ್ಮೆ ಇರಬೇಕೇ ಹೊರತು ದುರಹಂಕಾರ ಇರಬಾರದು. ಪೊಲೀಸ್ ಸಮವಸ್ತ್ರಕ್ಕೆ ಮತ್ತು ಪೊಲೀಸ್ ಇಲಾಖೆಗೆ ಚ್ಯುತಿ ಬಾರದ ಹಾಗೆ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ತಿಳಿಸಿದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 