ಪೋಲಿಯೊ ಮುಕ್ತ ಸಮಾಜಕ್ಕೆ ಎಲ್ಲರ ಸಹಕಾರ ಅಗತ್ಯ: ಶಾಸಕ ಪಠಾಣ್
Polio free society requires everyone's cooperation: MLA Pathan
ಶಿಗ್ಗಾವಿ 28 : ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಷಕರು ತಪ್ಪದೇ ಪೋಲಿಯೋ ಹನಿ ಹಾಕಿಸಬೇಕು ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು. ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ತಾಲೂಕಾಡಳಿತ, ತಾಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ತಾಲೂಕ ಮಟ್ಟದ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಈ ಹಿಂದೆ ಪೋಲಿಯೋ ಲಸಿಕೆ ಪಡೆದಿದ್ದ ಮಕ್ಕಳಿಗೂ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ದಿನ ಮತ್ತೊಮ್ಮೆ ಲಸಿಕೆ ನೀಡುವುದು ಸುರಕ್ಷತೆಯ ದೃಷ್ಟಿಯಿಂದ ಅಗತ್ಯವಾಗಿದೆ. ತಾಲೂಕಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. ತಾಲೂಕ ಆರೋಗ್ಯಾಧಿಕಾರಿ ಡಾ.ಸತೀಶ.ಎ.ಆರ್ ಮಾತನಾಡಿ 0 ರಿಂದ 5 ವರ್ಷದೊಳಗಿನ 16420 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 115 ಪೋಲಿಯೋ ಬೂತ್ಗಳು, 04 ಟ್ರಾನ್ಸಿಟ್ ತಂಡಗಳನ್ನು ರಚಿಸಲಾಗಿದೆ ಎಂದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 