ಪೋಲಿಯೊ ಮುಕ್ತ ಸಮಾಜಕ್ಕೆ ಎಲ್ಲರ ಸಹಕಾರ ಅಗತ್ಯ: ಶಾಸಕ ಪಠಾಣ್

ಪೋಲಿಯೊ ಮುಕ್ತ ಸಮಾಜಕ್ಕೆ ಎಲ್ಲರ ಸಹಕಾರ ಅಗತ್ಯ: ಶಾಸಕ ಪಠಾಣ್   Polio free society requires everyone's cooperation: MLA Pathan

ಶಿಗ್ಗಾವಿ  28 : ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ. ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಪೋಷಕರು ತಪ್ಪದೇ ಪೋಲಿಯೋ ಹನಿ ಹಾಕಿಸಬೇಕು ಎಂದು ಶಾಸಕ ಯಾಸೀರ ಅಹ್ಮದಖಾನ ಪಠಾಣ ಹೇಳಿದರು. ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ತಾಲೂಕಾಡಳಿತ, ತಾಲೂಕ ಆರೋಗ್ಯಾಧಿಕಾರಿಗಳ ಕಾರ್ಯಾಲಯ, ತಾಲೂಕ ಮಟ್ಟದ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ನಡೆದ ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಈ ಹಿಂದೆ ಪೋಲಿಯೋ ಲಸಿಕೆ ಪಡೆದಿದ್ದ ಮಕ್ಕಳಿಗೂ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಅಭಿಯಾನದ ದಿನ ಮತ್ತೊಮ್ಮೆ ಲಸಿಕೆ ನೀಡುವುದು ಸುರಕ್ಷತೆಯ ದೃಷ್ಟಿಯಿಂದ ಅಗತ್ಯವಾಗಿದೆ. ತಾಲೂಕಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು. ತಾಲೂಕ ಆರೋಗ್ಯಾಧಿಕಾರಿ ಡಾ.ಸತೀಶ.ಎ.ಆರ್ ಮಾತನಾಡಿ 0 ರಿಂದ 5 ವರ್ಷದೊಳಗಿನ 16420 ಮಕ್ಕಳಿಗೆ ಪೋಲಿಯೋ ಹನಿ ನೀಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ 115 ಪೋಲಿಯೋ ಬೂತ್‌ಗಳು, 04 ಟ್ರಾನ್ಸಿಟ್ ತಂಡಗಳನ್ನು ರಚಿಸಲಾಗಿದೆ ಎಂದರು