ಪೋಲಿಯೋ ಲಸಿಕೆ ಮಕ್ಕಳಿಗೆ ತಪ್ಪದೇ ಹಾಕಿಸಿ-ವಿ. ಕೆ. ಗುರುಮಠ
Polio vaccination should be given to children without fail - V. K. Gurumath
ಗದಗ 23: ಪೋಲಿಯೋ ಹನಿ ಐದು ವರ್ಷದ ಮಕ್ಕಳಿಗೆ ತಪ್ಪದೆ ಹಾಕಿಸುವ ಮೂಲಕ ಶಾಶ್ವತ ಅಂಗವಿಕಲತೆಯನ್ನು ತಡೆಯಬಹುದು. ಪೋಲಿಯೋ ಲಸಿಕೆಯ ಕೊಡುಗೆಯಲ್ಲಿ ರೋಟರಿ ಸಂಸ್ಥೆಯ ಸೇವೆ ಎಂದಿಗೂ ಮರೆಯಲಾಗದ್ದು ಎಂದು ಗದಗ ರೆವಿನ್ಯೂ ಡಿಸ್ಟಿಕ್ ಅಸಿಸ್ಟಂಟ್ ಗವರ್ನರ್ ವಿ.ಕೆ.ಗುರುಮಠ ಹೇಳಿದರು. ಅವರು ನಗರದ ಹಳೆಯ ಬಸ್ ನಿಲ್ದಾಣದಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಪೋಲಿಯೋ ಹನಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಅಗತ್ಯವಾಗಿದ್ದು ಪೋಲಿಯೋ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಆದ್ಯತೆಯಾಗಿದೆ ಎಂದರು.
ರೋಟರಿ ಗದಗ ಸೆಂಟ್ರಲ್ ಅಧ್ಯಕ್ಷ ಚೇತನ ಅಂಗಡಿಯವರು ಲಸಿಕೆ ಹಾಕುವುದರಿಂದಾಗುವ ಮಹತ್ವ ಕುರಿತು ತಿಳಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ರಾಜು ಉಮನಾಬಾದಿ, ಖಜಾಂಚಿ ಡಾ.ಪ್ರಭು ಗಂಜಿಹಾಳ, ಹಿರಿಯ ಸದಸ್ಯರಾದ ಮಂಜಣ್ಣ ಬೇಲೇರಿ, ಎಸ್.ಆಯ್ ಅಣ್ಣಿಗೇರಿ, ರಾಜು ಕುರುಡಗಿ, ರಾಜು ಮುಧೋಳ, ಮಧುಸೂದನ ಪುಣೇಕರ, ಬಿ.ಬಿ.ಸಂಕನಗೌಡರ, ರಾಜು ಕಂಟಿಗೊಣ್ಣನ್ನವರ, ಮುರುಗೇಶ ಬಡ್ನಿ, ಮಲ್ಲಿಕಾರ್ಜುನ ಚಂದಪ್ಪನವರ, ಕೆ.ವಿ.ಪಾಟೀಲ, ಪ್ರಕಾಶ ಉಗಲಾಟ, ಹಾಗೂ ಆರೋಗ್ಯ ಇಲಾಖೆಯ ಸಜಿದಾನಂದ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 