ದೆಹಲಿ ವಿಧಾನಸಭಾ ಸ್ಥಾನಗಳಿಗೆ ಮತದಾನ
Polling for Delhi Assembly seats
ನವದೆಹಲಿ 05: ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಬುಧವಾರ(ಫೆ5)ಮತದಾನ ನಡೆಯುತ್ತಿದೆ, ಬೆಳಗ್ಗೆ 11 ಗಂಟೆಯ ವರೆಗೆ 19.9 % ಮತದಾನ ನಡೆದಿದ್ದು ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ..
ಗಣ್ಯಾತೀಗಣ್ಯರಿಂದ ಮತದಾನ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಸಂಕೀರ್ಣದಲ್ಲಿರುವ ಡಾ. ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದಲ್ಲಿನ ಮತದಾನ ಕೇಂದ್ರದಲ್ಲಿ ಮತ ಚಲಾಯಿಸಿದರು.
ಉಪರಾಷ್ಟ್ರಪತಿ ಜಗದೀಪ್ ಧನಖರ್ ಹಕ್ಕು ಚಲಾಯಿಸಿ ಮಾತನಾಡಿ, “ಮತದಾನವು ಪ್ರಜಾಪ್ರಭುತ್ವದ ಆಮ್ಲಜನಕ ಮತ್ತು ಪ್ರಜಾಪ್ರಭುತ್ವದ ಮೂಲವಾಗಿದೆ. ಇದು ಎಲ್ಲಾ ಹಕ್ಕುಗಳಿಗೆ ಮೂಲಭೂತವಾಗಿದೆ ಮತ್ತು ಇದಕ್ಕಿಂತ ದೊಡ್ಡ ಹಕ್ಕು ಇನ್ನೊಂದಿಲ್ಲ” ಎಂದರು.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ತುಘಲಕ್ ಕ್ರೆಸೆಂಟ್‌ನಲ್ಲಿರುವ ವಿವಿಐಪಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.
ದೆಹಲಿ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮತದಾನ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ತಮ್ಮ ಕುಟುಂಬದ ಸದಸ್ಯರೊಂದಿಗೆ ಆಗಮಿಸಿದ್ದರು. ಪೋಷಕರರು ಕುಳಿತಿದ್ದ ಗಾಲಿ ಕುರ್ಚಿಯನ್ನು ಕೇಜ್ರಿವಾಲ್ ತಳ್ಳಿಕೊಂಡು ಆಗಮಿಸಿ, ಮತ ಚಲಾಯಿಸಿದರು.
ದೆಹಲಿಯಲ್ಲಿ ಬೆಳಗ್ಗೆ 7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6:30 ಗಂಟೆವರೆಗೂ ನಡೆಯಲಿದೆ. 1.56 ಕೋಟಿ ಮತದಾರರು ಮತ ಚಲಾವಣೆ ಮಾಡಲಿದ್ದಾರೆ. ಒಟ್ಟು 699 ಅಭ್ಯರ್ಥಿಗಳು ಕಣದಲ್ಲಿದ್ದು ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಫೆಬ್ರವರಿ 8ಕ್ಕೆ ಫಲಿತಾಂಶ ಹೊರಬೀಳಲಿದೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 