ವೃತ್ತಿ ಬದುಕಿನಲ್ಲಿ ಎದುರಿಸಿದ ಕಠಿಣ ಓವರ್‌ ಬಗ್ಗೆ ತಿಳಿಸಿದ ಪಾಂಟಿಂಗ್

ನವದೆಹಲಿ, ಏ 10,ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿರುವ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್‌ ತಮ್ಮ ಟೆಸ್ಟ್‌ ಕ್ರಿಕೆಟ್‌ ವೃತ್ತಿ ಬದುಕಿನಲ್ಲಿ ಎದುರಿಸಿದ ಅತ್ಯಂತ ಕಷ್ಟದ ಓವರ್‌ ಕುರಿತಾಗಿ ಹೇಳಿಕೊಂಡಿದ್ದಾರೆ.ಆಸ್ಟ್ರೇಲಿಯಾ ತಂಡಕ್ಕೆ ಎರಡು ಬಾರಿ ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಗೆದ್ದು ಕೊಟ್ಟ ಯಶಸ್ವಿ ನಾಯಕ ಪಂಟರ್‌, 2005ರಲ್ಲಿ ನಡೆದ ಆ್ಯಷಸ್‌ ಟೆಸ್ಟ್‌ ಸರಣಿಯಲ್ಲಿ ಇಂಗ್ಲೆಂಡ್‌ನ ಆಲ್‌ರೌಂಡರ್‌ ಆಂಡ್ರ್ಯೂ ಫ್ಲಿಂಟಾಫ್‌ ಎದುರು ತಮ್ಮ ವೃತ್ತಿ ಜೀವನದ ಅತ್ಯಂತ ಕಠಿಣ ಓವರ್‌ ಎದುರಿಸಿದ್ದಾಗಿ ಹೇಳಿದ್ದಾರೆ.ಅಂದು ಆ ಪಂದ್ಯದಲ್ಲಿ ಫ್ಲಿಂಟಾಫ್‌ ಅದ್ಭುತ ರಿವರ್ಸ್‌ ಸ್ವಿಂಗ್‌ ಬೌಲಿಂಗ್‌ ಮೂಲಕ ಇಂಗ್ಲೆಂಡ್‌ ತಂಡ ಆಸ್ಟ್ರೇಲಿಯಾ ಎದುರು 2 ರನ್‌ಗಳ ರೋಚಕ ಜಯ ದಾಖಲಿಸಿತ್ತು. ಆ ಪಂದ್ಯದಲ್ಲಿ ರಿಕಿ ಪಾಂಟಿಂಗ್‌ ಅವರನ್ನು ಫ್ಲಿಂಟಾಫ್‌ ಔಟ್‌ ಮಾಡಿದ ಅದ್ಭುತ ಓವರ್‌ನ ವಿಡಿಯೋ ತುಣುಕನ್ನು ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಸಂಸ್ಥೆ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿದೆ. ಇದಕ್ಕೆ ಉತ್ತರ ನೀಡಿದ ರಿಕಿ ಪಾಂಟಿಂಗ್‌ ತಮ್ಮ ವೃತ್ತಿ ಬದುಕಿನಲ್ಲಿ ಎದುರಿಸಿದ ಅತ್ಯಂತ ಕಷ್ಟದ ಓವರ್‌ ಅದು. ಗಂಟೆಗೆ 150 ಕಿ.ಮೀ ವೇಗದಲ್ಲಿ ಚೆಂಡು ಬರುತ್ತಿತ್ತು. ಅದು ಅದ್ಭುತ ರಿವರ್ಸ್‌ ಸ್ವಿಂಗ್‌ ಬೌಲಿಂಗ್‌ ಎಂದಿದ್ದಾರೆ.