ಚುನಾವಣಾ ಜಾಹೀರಾತಿಗೆ ಪೂವರ್ಾನುಮತಿ ಕಡ್ಡಾಯ: ಜಿಲ್ಲಾಧಿಕಾರಿ
ಕಾರವಾರ : ಯಲ್ಲಾಪುರ ಉಪ ಚುನಾವಣೆ ಅಂಗವಾಗಿ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 4 ಹಾಗೂ 5 ರಂದು ಅಭ್ಯಥರ್ಿಗಳು,ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ದಿನಪತ್ರಿಕೆಗಳಲ್ಲಿ ಯಾವುದೇ ರೀತಿಯ ಚುನಾವಣಾ ಜಾಹೀರಾತು ಪ್ರಕಟಿಸಬೇಕಾದರೆ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿಯ(ಎಂಸಿಎಂಸಿ) ಮೂಲಕ ಪೂವರ್ಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಡಾ. ಹರಿಶಕುಮಾರ ಹೇಳಿದ್ದಾರೆ.
ಡಿಸೆಂಬರ್ 4 ಹಾಗೂ 5 ರಂದು ಮುದ್ರಣ ಮಾಧ್ಯಮಗಳಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಬೇಕೆಂದು ಬಯಸುವ ಅಭ್ಯಥರ್ಿಗಳು ಸ್ವಯಂ ದೃಢೀಕೃತ ಪ್ರತಿಗಳೊಂದಿಗೆ ನಿಗದಿತ ಅಜರ್ಿ ನಮೂನೆಯಲ್ಲಿ ಜಿಲ್ಲಾ ಮಟ್ಟದ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಗೆ ಅಜರ್ಿ ಸಲ್ಲಿಸಬೇಕು ಎಂದು ಹೇಳಿದ್ದಾರೆ
ಚುನಾವಣೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾಮಟ್ಟದ ಎಂಸಿಎಂಸಿ ಕಡೆಯಿಂದ ಪೂವರ್ಾನುಮತಿ ಪಡೆಯದ ಅಭ್ಯಥರ್ಿಗಳ ಜಾಹೀರಾತುಗಳನ್ನು ಸ್ಥಳೀಯ, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದ ದಿನಪತ್ರಿಕೆಗಳು ಪ್ರಕಟಿಸಬಾರದು ಎಂದು ಚುನಾವಣಾ ಆಯೋಗ ತಿಳಿಸಿರುತ್ತದೆ.
ಮತದಾರರಲ್ಲದವರು ಮತಕ್ಷೇತ್ರದಿಂದ ಹೊರಗಿರಬೇಕು : ಮತದಾನ ನಡೆಯುವ ದಿನದಂದು ಯಲ್ಲಾಪುರ ಮತಕ್ಷೇತ್ರದಲ್ಲಿ ಮತದಾನ ಹಕ್ಕು ಇಲ್ಲದೇ ಇರುವಂತಹವರು( ಯಲ್ಲಾಪುರ ಮತಕ್ಷೇತ್ರದ ಮತದಾರರಲ್ಲದವರು ) ಮತಕ್ಷೇತ್ರದಿಂದ ಹೊರಗಿರಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಪೂವರ್ಾನುಮತಿಗೆ ಅಜರ್ಿ ಲಭ್ಯ:
ಡಿಸೆಂಬರ್ 4 ಹಾಗೂ 5 ರಂದು ಮುದ್ರಣ ಮಾಧ್ಯಮದಲ್ಲಿ ಪ್ರಕಟಿಸಲು ಅಗತ್ಯವಿರುವ ನಿಗದಿತ ನಮೂನೆಯ ಅಜರ್ಿ ನಮೂನೆಗಳು ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರವಾರ ಹಾಗೂ ಯಲ್ಲಾಪುರ ಚುನಾವಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು.
ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಮಾರ್ಗಸೂಚಿ:
ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ-1951 ರ ಕಲಂ 126 ರ ಪ್ರಕಾರ ನಿಷೇಧಿಸಲಾಗಿದೆ.
ಚುನಾವಣಾ ಸಂಬಂಧಿ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪರಿಣಾಮ ಬೀರುವಂತಹ ವಿಷಯಗಳಾಗಿರುತ್ತವೆ.
ಟಿವಿ/ರೇಡಿಯೋ/ಕೇಬಲ್ ನೆಟವರ್ಕ ಮತ್ತು ಎಲ್ಲ ಡಿಜಿಟಲ್ ಮಾಧ್ಯಮಗಳು ಮತದಾನಪೂರ್ವ 48 ಗಂಟೆಗಳ ಅವಧಿಯಲ್ಲಿ ಚುನಾವಣೆ ಸಂಬಂಧಿ ವಿಷಯಗಳು ಪ್ರಸಾರ ಮಾಡದಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿರುತ್ತಾರೆ. .
ಕಾರ್ಯಕ್ರಮದಲ್ಲಿ ಭಾಗವಹಿಸುವವರು(ಪ್ಯಾನಲಿಸ್ಟ್) ಯಾವುದೇ ಪಕ್ಷ ಅಥವಾ ಅಭ್ಯಥರ್ಿಗಳ ಪರ ಅಥವಾ ವಿರೋಧವಾಗಿರುವ ಅಭಿಪ್ರಾಯಗಳು/ಮನವಿಗಳು ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ವಿಷಯಗಳನ್ನು ಕೂಡ ಪ್ರಸಾರ ಮಾಡಕೂಡದು.
ನಿಗದಿತ 48 ಗಂಟೆಗಳ ಅವಧಿಯಲ್ಲಿ ಓಪಿನಿಯನ್ ಪೋಲ್ ಫಲಿತಾಂಶ ಪ್ರಕಟಿಸುವುದು. ಚಚರ್ೆ ಅಥವಾ ವಿಶ್ಲೇಷಣೆ ಏರ್ಪಡಿಸುವುದು. ಅದೇ ರೀತಿ ಚುನಾವಣೋತ್ತರ ಸಮೀಕ್ಷೆಗಳನ್ನು ಪ್ರಸಾರ ಮಾಡುವುದು ಕೂಡ ಪ್ರಜಾಪ್ರತಿನಿಧಿ ಕಾಯ್ದೆ-1951 ರ ಕಲಂ 126 ರ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ಡಿಸಿ ಮಾಹಿತಿ ನೀಡಿದ್ದಾರೆ.