ಲೋಕದರ್ಶನ ವರದಿ
ಚಿಕ್ಕೋಡಿ 11: ಕ್ಷಣ ಕ್ಷಣಕೂ ಏರುತ್ತಿರುವ ಜನಸಂಖ್ಯೆಯಿಂದ ಹಲವಾರು ತೊಂದರೆಗಳನ್ನು ವಿಶ್ವ ಎದುರಿಸುತ್ತದೆ. ಹಾಗಾಗಿ ಜನಸಂಖ್ಯೆ ನಿಯಂತ್ರಿಸುವ ಕಾರ್ಯ ಅನಿವಾರ್ಯವಾಗಿದೆ. ಇಲ್ಲವಾದರೆ ಮೂಲಭೂತ ಅವಶ್ಯಕತೆಗಳು ಮತ್ತು ಸೌಕರ್ಯಗಳನ್ನು ಒದಗಿಸುವುದು ಕಷ್ಟವಾಗುತ್ತದೆ. ಕುಟುಂಬ ಯೋಜನೆ ಅನುಷ್ಠಾನಗೊಳಿಸಿ ಜನಸಂಖ್ಯೆ ನಿಯಂತ್ರಿಸಬೇಕು ಎಂದು ಚಿಕ್ಕೋಡಿ ಅಪರ ಜಿಲ್ಲಾ ಆರೋಗ್ಯಾಧಿಕಾರಿ ಎಸ್.ವಿ.ಮುನ್ಯಾಳ ಹೇಳಿದರು.
ಬುಧವಾರ ಇಲ್ಲಿನ ಸಿಟಿಇ ಸಂಸ್ಥೆಯ ಸಭಾ ಭವನದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳಗಾವಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಭಾರತೀಯ ಕುಟುಂಬ ಯೋಜನಾ ಸಂಘ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾತರ್ಾ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು. ಜನಸಂಖ್ಯೆ ಏರಿಕೆಯನ್ನು ನಿಯಂತ್ರಿಸುತ್ತಿದ್ದರೆ ಬರುವ 2050 ರಹೊತ್ತಿಗೆ ವಿಶ್ವದ ಜನಸಂಖ್ಯೆ ಒಂದು ಸಾವಿರ ಕೋಟಿ ತಲುಪುದರಲ್ಲಿ ಆಶ್ಚರ್ಯವಿಲ್ಲ ಎಂದರು.
ಬೆಳೆಯುವ ಮಕ್ಕಳು ರಾಷ್ಟ್ರದ ಸಂಪತ್ತು ಆಗಿರುವದರಿಂದ ಚಿಕ್ಕ ವಯಸ್ಸಿನಲ್ಲಿ ಮದುವೆ ಮಾಡದೇ ಮಕ್ಕಳಿಗೆ ಶಿಕ್ಷಣ ನೀಡಿ ದೇಶದ ಒಳ್ಳೆಯ ಪ್ರಜೆಗಳನ್ನಾಗಿ ಮಾಡಬೇಕು. ಮಾತೃಪೂರ್ಣ ಯೋಜನೆ ಮೂಲಕ ತಾಯಿ ಮರಣ ಪ್ರಮಾಣ ಕಡಿಮೆ ಮಾಡಬೇಕು. ಜನಸಂಖ್ಯೆ ನಿಯಂತ್ರಿಸಲು ಗ್ರಾಮೀಣ ಭಾಗದ ಜನರಲ್ಲಿ ಜಾಗೃತಿ ಮೂಡಿಸಲು ಆರೋಗ್ಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸದಾ ಪ್ರಯತ್ನ ಮಾಡಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ,ಸಾವಿತ್ರಿ ಭೆಂಡಿಗೇರಿ ಮಾತನಾಡಿ ಬಡತನ, ಅಜ್ಞಾನ, ಮೂಡನಂಭಿಕೆಯಿಂದ ಜನಸಂಖ್ಯೆ ಹೆಚ್ಚಾಗುತ್ತಿದೆ. ಬಾಲ್ಯ ವಿವಾಹ ತಪ್ಪಿಸಿ ಸಣ್ಣ ವಯಸ್ಸಿನಲ್ಲಿ ತಾಯಂದಿರಾಗುವದರಿಂದ ಉಂಟಾಗುವ ತೊಂದರೆಗಳ ಬಗ್ಗೆ ಅರಿವು ಮೂಡಿಸಬೇಕು. ಕುಟುಂಬ ನಿಯಂತ್ರಣ ಯೋಜನೆ ಬಗ್ಗೆ ತಿಳಿಸುವುದು. ಯುವ ಜನರಲ್ಲಿ ಸುರಕ್ಷಿತ ಮತ್ತು ಆರೋಗ್ಯಕರ ಲೈಂಗಿಕತೆ ಬಗ್ಗೆ ಶಿಕ್ಷಣ ನೀಡುವದರಿಂದ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕಾ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಉಮರ್ಿಳಾ ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪನ್ಯಾಸಕ ಎನ್.ವಿ.ಶಿರಗಾಂವಕರ ಉಪನ್ಯಾಸಕ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ವೈದ್ಯಕೀಯಲ್ಲಿ ವಿಶೇಷ ಸಾಧನೆಗೈದ ಡಾ, ಎಂ,ವಿ,ಕಿವಡಸನ್ನವರ, ಡಾ, ಸೂರ್ಯಕಾಂತ ಕಾಂಬಳೆ, ಡಾ, ಆರ್.ಎಸ್.ಬಂತಿ, ಡಾಮ ಸೀಮಾ ಗುಂಜಾಳ, ಡಾ, ರಮೇಶ ದಂಡಗಿ ಅವರನ್ನು ಗಣ್ಯರು ಸನ್ಮಾನಿಸಿದರು.
ವೇದಿಕೆ ಮೇಲೆ ಪುರಸಭೆ ಉಪಾಧ್ಯಕ್ಷ ಸಂದೀಪ ಶೆರಖಾನೆ, ತಾಲೂಕಾ ಪಂಚಾಯತಿ ಕಾರ್ಯನಿವರ್ಾಹಕ ಅಧಿಕಾರಿ ಕೆ.ಎಸ್.ಪಾಟೀಲ, ತಾ.ಪಂ.ಉಪಾಧ್ಯಕ್ಷೆ ಮಹಾದೇವಿ ನಾಯಿಕ, ಡಾ, ಸಂತೋಷ ಕೊಣ್ಣೂರೆ,ಸೋಮನಾಥ ಪೂಜಾರಿ, ಜಗದೀಶ ಹುಲಕುಂದ, ವಿರೇಂದ್ರ ಚೌಗಲಾ ಮುಂತಾದವರು ಉಪಸ್ಥಿತರಿದ್ದರು.
ತಾಲೂಕಾ ಆರೋಗ್ಯಾಧಿಕಾರಿ ಡಾ,ವಿ.ವಿ.ಶಿಂಧೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಾಥಾ ಕಾರ್ಯಕ್ರಮ: ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮಗಿಂತ ಮೊದಲು ಪಟ್ಟಣದ ಶಾಲಾ-ಕಾಲೇಜು ವಿದ್ಯಾಥರ್ಿಗಳು, ಶಿಕ್ಷಣ, ಆರೋಗ್ಯ ಮತ್ತು ಆಶಾ ಕಾರ್ಯಕರ್ತರು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಜಾಥಾ ನಡೆಸಿದರು. ಜಾಥಾ ಕಾರ್ಯಕ್ರಮಕ್ಕೆ ಏಳನೆ ಜಿಲ್ಲಾ ಸತ್ರ ನ್ಯಾಯಾಧೀಶ ಮಹಾಂತಪ್ಪ ಎಡಿ ಹಾಗೂ ತಹಶೀಲ್ದಾರ ಸಿ.ಎಸ್.ಕುಲಕಣರ್ಿ ಚಾಲನೆ ನೀಡಿದರು.
ಪೋಟೋ ಶೀಷರ್ಿಕೆ:11ಸಿಕೆಡಿ2: ಚಿಕ್ಕೋಡಿ ಪಟ್ಟಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಜಾಥಾಗೆ ಏಳನೆ ಜಿಲ್ಲಾ ಸತ್ರ ನ್ಯಾಯಾಧೀಶ ಮಹಾಂತಪ್ಪ ಎಡಿ ಹಾಗೂ ತಹಶೀಲ್ದಾರ ಸಿ.ಎಸ್.ಕುಲಕಣರ್ಿ ಚಾಲನೆ ನೀಡಿದರು.