34 ಸಾವಿರಕ್ಕೂ ಅಧಿಕ ಮತದಾರರ ಹೆಸರು ಡೀಲೀಟ್ ಸಾಧ್ಯತೆ

34 ಸಾವಿರಕ್ಕೂ ಅಧಿಕ ಮತದಾರರ ಹೆಸರು ಡೀಲೀಟ್ ಸಾಧ್ಯತೆ  Possibility of over 34,000 voters' names being deleted

ಲೋಕದರ್ಶನ ವರದಿ 

 ಜಮಖಂಡಿ, ಆ.13: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಜಮಖಂಡಿ ವಿಧಾನಸಭಾ ಕ್ಷೇತ್ರದ 34 ಸಾವಿರಕ್ಕೂ ಅಧಿಕ ಮತದಾರರ ಹೆಸರುಗಳು ಪಟ್ಟಿಯಿಂದ ಡೀಲೀಟ್ ಆಗುವ ಸಾಧ್ಯತೆ ಇದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ತಿಳಿಸಿದ್ದಾರೆ.  

ತಾಲೂಕು ಆಡಳಿತ ಕಚೇರಿಯ ಸಭಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಒಟ್ಟು 2,30,006 ಮತದಾರರಿದ್ದು, ಈ ಪೈಕಿ 1,96,006 ಮಂದಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದ ಅರ್ಜಿಗಳನ್ನು ಭರ್ತಿ ಮಾಡಿದ್ದಾರೆ ಎಂದು ತಿಳಿಸಿದರು.  

ಮತದಾರರ ಪಟ್ಟಿ ಪರೀಶೀಲನೆ ವೇಳೆ ಸುಮಾರು 7,446 ಮತದಾರರು ಮೃತಪಟ್ಟಿರುವುದು, 22,611 ಮಂದಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡಿರುವುದು ಹಾಗೂ ಉದ್ಯೋಗ, ಮದುವೆ ಸೇರಿದಂತೆ ವಿವಿಧ ಕಾರಣಗಳಿಂದ 2,199 ಮಂದಿ ಬೇರೆ ಊರುಗಳಿಗೆ ತೆರಳಿರುವುದು ಪತ್ತೆಯಾಗಿದೆ. ಮತ್ತೊಂದೆಡೆ 2,286 ಮತದಾರರ ವಿವರಗಳು ಲಭ್ಯವಿಲ್ಲ ಎಂದು ಅವರು ಹೇಳಿದರು.  

ಆನ್‌ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಈವರೆಗೆ 432 ಮಂದಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ತಹಶೀಲ್ದಾರ್ ಅನಿಲ್ ಬಡಿಗೇರ ಉಪಸ್ಥಿತರಿದ್ದರು.