ಕೋಳಿ ಸಾಕಾಣಿಕೆದಾರರ ಧರಣಿ
Poultry farmers' protest
ಲೋಕದರ್ಶನ ವರದಿ
ರಾಣೇಬೆನ್ನೂರ 05: ರಾಣೆಬೆನ್ನೂರಿನ ಕೃಷ್ಣಾಪುರ-ತೆರೆದಹಳ್ಳಿ ಗ್ರಾಮದ ಶ್ರೀ ವೆಂಕಟೇಶ್ವರ ಹ್ಯಾಚರೀಸ್ ಪ್ರೈ.ಲಿ. ಕಂಪನಿಯ ಎದುರು ಕರ್ನಾಟಕ ರಾಜ್ಯ ಕೋಳಿ ಸಾಕಾಣಿಕೆದಾರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹಾವೇರಿ ಜಿಲ್ಲಾ ಕೋಳಿ ಸಾಕಾಣಿಕೆದಾರರ ಸಂಘದ ನೇತೃತ್ವದಲ್ಲಿ ಕೋಳಿ ಸಾಕಾಣಿಕೆದಾರರು ಧರಣಿ ನಡೆಸಿದರು.
ಕೋಳಿಗಳಿಗೆ ಸೂಕ್ತ ಬೆಲೆ ನೀಡುತ್ತಿಲ್ಲ, ಸರ್ಕಾರ ನಿಗದಿಪಡಿಸಿರುವ ದರವನ್ನು ಜಾರಿಗೊಳಿಸಬೇಕು, ಗ್ರೋಯಿಂಗ್ ಚಾರ್ಜ್ ಹೆಚ್ಚಿಸಬೇಕು ಹಾಗೂ ಪರಿಷ್ಕೃತ ದರವನ್ನು ಅನುಷ್ಠಾನಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೇಡಿಕೆಗಳನ್ನು ಈಡೇರಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಂಘದ ಮುಖಂಡರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಕೋಳಿ ಸಾಕಾಣಿಕೆದಾರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 