ಮಾ.27 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ 25: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2ರ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾರ್ಯ ಕೈಗೊಳ್ಳುತ್ತಿರುವುರಿಂದ ಮಾ.27 ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-13 ವ್ಯಾಪ್ತಿಯ ದೇವಿನಗರ, ಸಿರುಗುಪ್ಪ ರಸ್ತೆ, ಇಂದಿರಾ ನಗರ, ಸಂಜಯನಗರ, ಶಿವಲಿಂಗ ನಗರ, ಶಾಸ್ತ್ರೀನಗರ, ಬಸವನಕುಂಟೆ, ಎಂ.ಕೆ.ನಗರ, ಹವಂಬಾವಿ, ಅಶೋಕ ನಗರ, ಶ್ರೀನಿವಾಸ ನಗರ, ಕುರಿಹಟ್ಟಿ, ಎಸ್.ಪಿ.ಸರ್ಕಲ್, ವೀರಣ್ಣಗೌಡ ನಗರ, ರಾಜೇಶ್ವರಿ ನಗರ, ಕೆ.ಎಂ.ಎಫ್, ಭುವನಗಿರಿ ಕಾಲೋನಿ, ಎಸ್.ಎಲ್.ವಿ ಕಾಲೋನಿ, ಶಿವಗಿರಿ ಕಾಲೋನಿ, ರಾಮನಗರ, ಶ್ರೀನಿವಾಸ ನಗರ. ಸೂರ್ಯ ಕಾಲೋನಿ, ಮರಾಠಿ ಗಲ್ಲಿಸೇರಿದಂತೆ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ 25: ನಗರದ ಹನುಮಾನ್ ನಗರ ಬಡಾವಣೆಯ ನಿವಾಸಿಯಾದ ಗಣೇಶ್ ಎನ್ನುವ 28 ವರ್ಷದ ವ್ಯಕ್ತಿಯು ಮಾ.20 ರಂದು ಕಾಣೆಯಾಗಿದ್ದು, ಈ ಕುರಿತು ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಚಹರೆ ಗುರುತು:
ಅಂದಾಜು 5.6 ಅಡಿ ಎತ್ತರ, ದುಂಡು ಮುಖ, ಗೋದಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಮೀಸೆ ಹಾಗೂ ಗಡ್ಡ ಹೊಂದಿರುತ್ತಾನೆ. ಎಡಗೈ ಮೇಲೆ ವಿಕ್ರಮ್ ಎಂದು ಆಂಗ್ಲ ಭಾಷೆಯಲ್ಲಿ ಹಚ್ಚೆ ಹಾಕಿಸಿರುತ್ತಾನೆ.ಕಾಣೆಯಾದ ಸಂದರ್ಭದಲ್ಲಿ ಬಿಳಿ ಮತ್ತು ನೀಲಿ ಬಣ್ಣದ ತುಂಬು ತೋಳಿನ ಚೆಕ್ಸ್ ಶರ್ಟ್ ಹಾಗೂ ಬೂದು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ.ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ದೂ.08392-272022 ಅಥವಾ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.