ಪವರಸ್ಟಾರ್ ಪುನೀತ್ ರಾಜ್‌ಕುಮಾರ್ ನಾಲ್ಕನೇ ವರ್ಷದ ಪುಣ್ಯೆ ಸ್ಮರಣೆ
Powerstar Puneeth Rajkumar's fourth death anniversary
ಮುಂಡಗೋಡ 29: ಕನ್ನಡ ಚಿತ್ರರಂಗದ ಪವರಸ್ಟಾರ್ ಪುನೀತ್ ರಾಜ್‌ಕುಮಾರ್, ಕನ್ನಡಿಗರ ಪಾಲಿನ ಆರಾಧ್ಯ ದೈವ. ಅಪ್ಪು ನಿಧನರಾಗಿ ನಾಲ್ಕು ವರ್ಷಗಳು ಕಳೆದಿದೆ.
ಕರ್ನಾಟಕ ರತ್ನ ಪವರಸ್ಟಾರ್ ಪುನೀತ್ ರಾಜ್‌ಕುಮಾರ್ ನಾಲ್ಕುನೇ ವರ್ಷದ ಪುಣ್ಯಸ್ಮರಣೆ ನಡೆಯಲಿದೆ. ಕರ್ನಾಟಕ ರತ್ನ ಪವರಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ನಾಲ್ಕುನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಮುಂಡಗೋಡ ಬಸ್ ನಿಲ್ದಾಣದ ಆಟೋ ಚಾಲಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಅವರು ಕರ್ನಾಟಕ ರತ್ನ ಪವರಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಹಿರೇಹಳ್ಳಿ, ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಚ್.ಎಮ್.ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ, ಪ್ರಮುಖರಾದ ಸಿದ್ಧಪ್ಪ ಹಡಪದ, ಕೆ.ಸಿ.ಗಲಭಿ ಶೇಖರ್ ಲಮಾಣಿ, ಶಿವರಾಜ್ ಸುಬ್ಬರಾಯ ರಜಾ ಖಾನ್ ಪಠಾಣ್, ಮಹಮ್ಮದ್ ಗೌಸ್, ಫಣಿರಾಜ ಹದಲಗಿ ಪ.ಪಂ ಸದಸ್ಯರು, ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು, ಆಟೋ ಚಾಲಕರು ಸಾರ್ವಜನಿಕರು ಹಾಗೂ ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 