ಮಾರ್ಚ್ 1 ರಂದು ಅಯ್ಯಪ್ಪ ದೇವಾಲಯದಲ್ಲಿ ಪ್ರಭಾತ ಸಂಗೀತ ಕಾರ್ಯಕ್ರಮ
Prabhata Sangeet program at Ayyappa Temple on March 1st
ಬಳ್ಳಾರಿ 22: ಹರಿದಾಸ ಪರಂಪರೆಯ ಶ್ರೇಷ್ಠ ಸಂತರಾದ ತ್ಯಾಗರಾಜರು ಮತ್ತು ಪುರಂದರ ದಾಸರ ಆರಾಧನೆ ಪ್ರಯುಕ್ತ ಬಳ್ಳಾರಿ ಮ್ಯೂಸಿಕ್ ಕ್ಲಬ್ ಇವರು ಮಾರ್ಚ್ 1 ರಂದು ಭಾನುವಾರ ಬೆಳಿಗ್ಗೆ 8 ಗಂಟೆಗೆ ಕರ್ನಾಟಕ ಸಂಗೀತ ಕಚೇರಿ ಪ್ರಭಾತ ಸಂಗೀತ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 10.30 ಕ್ಕೆ ಸಂಗೀತ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ವಿದುಷಿ ಸ್ಮೃತಿ ಭಾಸ್ಕರ್ ಅವರು ಕರ್ನಾಟಕ ಸಂಗೀತ ಕಚೇರಿ ನಡೆಸಿಕೊಡಲಿದ್ದಾರೆ. ನಗರದ ಅನಂತಪುರ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ದೈವಿಕ ಆವರಣದಲ್ಲಿ ಭಾವಪೂರ್ಣ ಸಂಗೀತವನ್ನು ಆನಂದಿಸಲು ಅಂದು ಕುಟುಂಬ ಸಮೇತರಾಗಿ ಆಗಮಿಸಬಹುದು. ಆಸಕ್ತ ಅಭ್ಯರ್ಥಿಗಳು ಸಂಗೀತ ಕಾರ್ಯಾಗಾರ ನೋಂದಣಿಗಾಗಿ ಮಾಯಾ ಪಿ. ರಾವ್ +91 97390 97388 ಮತ್ತು ಡಾ. ವೀಣಾ +91 94800 12300 ಅವರನ್ನು ಸಂಪರ್ಕಿಸಬಹುದು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 