ಪ್ರಭುಲಿಂಗೇಶ್ವರ ನೂತನ ರಥದ ಪುರಪ್ರವೇಶ: ಕಿಚಡಿ ಜಾತ್ರೆಯಲ್ಲಿ ಇನ್ಮುಂದೆ ರಥೋತ್ಸವ
Prabhulingeshwara's new chariot enters the city: Chariot festival to continue at Khichdi fair
ಮಹಾಲಿಂಗಪುರ 26: ಚಿಮ್ಮಡ ಗ್ರಾಮದಲ್ಲಿ ಸೆ. 4ರಂದು ನಡೆಯಲಿರುವ ಕಿಚಡಿ ಜಾತ್ರೆಗಾಗಿ ಸುಮಾರು 40 ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾದ ಬೃಹತ್ ರಥದ ಪುರ ಪ್ರವೇಶ ಕಾರ್ಯಕ್ರಮ ರವಿವಾರ ನಡೆಯಿತು.
ಸ್ಥಳಿಯ ವಿರಕ್ತಮಠದ ಪ್ರಭು ಮಹಾಸ್ವಾಮಿಗಳ ಹಾಗೂ ಜನಾರ್ಧನ ಮಹಾರಾಜರ ಸಾನಿಧ್ಯದಲ್ಲಿ ನಡೆದ ನೂತನ ರಥದ ಪುರ್ರವೇಶ ಕಾರ್ಯಕ್ರಮದಲ್ಲಿ ಸ್ಥಳಿಯ ಬಸ್ ನಿಲ್ದಾಣದ ಮಹಾದ್ವಾರದಿಂದ ನೂರಾರು ಮಹಿಳೆಯರಿಂದ ಆರತಿ ಕುಂಭ, ಸಕಲ ವಾದ್ಯ ವೃಂದಗಳೊಂದಿಗೆ ಗ್ರಾಮದ ಪ್ರಭುಲಿಂಗೇಶ್ವರ ದೇವಸ್ಥಾನದ ವರೆಗೆ ಮೆರವಣಿಗೆ ಮೂಲಕ ತರಲಾಯಿತು.
ನಂತರ ವಿಶೇಷ ಪೂಜೆ, ಮಹಾಮಂಗಳಾರತಿಯ ನಂತರ ಮಹಾಪ್ರಸಾದ ವಿತರಣೆ ನಡೆಯಿತು. ಪ್ರಭುಲಿಂಗ ಸೇವಾ ಸಮೀತಿಯ ಪ್ರಮುಖರಾದ ರಾಮಣ್ಣ ಮುಗಳಖೋಡ, ಪುಂಡಲಿಕಪ್ಪಾ ಪೂಜಾರಿ, ಅಣ್ಣಪ್ಪಗೌಡ ಪಾಟೀಲ, ಬಾಳಪ್ಪ ಹಳಿಂಗಳಿ, ರಾಚಯ್ಯ ಮಠಪತಿ, ರಾಮಣ್ಣ ಬಗನಾಳ, ಗುರ್ಪ ಬಳಗಾರ, ಬಸಪ್ಪ ಮುಗಳಖೋಡ, ಗ್ರಾ.ಪಂ. ಮಾಜಿ ಅಧ್ಯಕ್ಷ ಗುರಲಿಂಗಪ್ಪ ಪೂಜಾರಿ, ಶಂಕರ ಬಟಕುರ್ಕಿ, ಪರಾ್ಪ ಪಾಲಭಾವಿ, ಬೀರ್ಪ ಹಳೆಮನಿ, ಪ್ರಕಾಶ ಪಾಟೀಲ, ಬಸವರಾಜ ಕುಂಚನೂರ, ಉಮೇಶ ಪೂಜಾರಿ, ಅಶೋಕ ಧಡೂತಿ, ಆನಂದ ಕವಟಿ, ಅಶೋಕ ಮೋಟಗಿ, ಪ್ರಭು ಮುಧೋಳ, ಮಹಾಲಿಂಗ ಮಾಯಣ್ಣವರ, ಮಹಾಂತೇಶ ಜಾಲಿಕಟ್ಟಿ, ಪ್ರಕಾಶ ಪಾಲಭಾವಿ, ಮಹಾಲಿಂಗ ಬಳಗಾರ, ಪ್ರವೀಣ ಪೂಜಾರಿ, ಶ್ರೀಶೈಲ ಮಠಪತಿ, ಅವ್ವನಪ್ಪ ಮುಗಳಖೋಡ ಸೇರಿದಂತೆ ಹಲವಾರು ಜನ ಪ್ರಮುಖರು ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 