ಪ್ರಬುದ್ಧ ಭಾರತ ನಿರ್ಮಾಣ ಅಂಬೇಡ್ಕರ್‌ರ ಕನಸು: ಪ್ರೊ.ವಿಶ್ವನಾಥ
Prabuddha Bharat Nirman Ambedkar's dream: Prof. Vishwanath
ಬಳ್ಳಾರಿ 19: ಬುದ್ಧನ ವೈಚಾರಿಕತೆಯನ್ನು ಅಳವಡಿಸಿಕೊಂಡು ದೇಶದಅತಿದೊಡ್ಡ ಪಿಡುಗಾದಜಾತಿ ವ್ಯವಸ್ಥೆಯನ್ನು ತೊಡೆದು ಹಾಕಿ ಪ್ರಬುದ್ಧ ಭಾರತ ನಿರ್ಮಿಸುವ ಕನಸನ್ನು ಡಾ.ಬಿ.ಆರ್‌ಅಂಬೇಡ್ಕರ್ ಅವರು ಕಂಡಿದ್ದರು ಎಂದು ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್) ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಶ್ವನಾಥ ಅವರು ಹೇಳಿದರು. ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ.ಬಿ.ಆರ್‌ಅಂಬೇಡ್ಕರ್ ತರಬೇತಿ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರ ಹಾಗೂ ಇನ್ಸಿ-್ಟಟ್ಯೂಟ್ ಆಫ್ ಡಾ.ಬಿ.ಆರ್‌ಅಂಬೇಡ್ಕರ್ ಟ್ರೇನಿಂಗ್, ರಿಸರ್ಚ್ ಆ್ಯಂಡ್ ಎಕ್ಸ್ ಟೆನ್ಷಿಯನ್ ಸೆಂಟರ್, ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಿರುವ ಎರಡು ದಿನಗಳ ‘ಪ್ರಬುದ್ಧ ಭಾರತ’ ಅಂತರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಪಂಚಾಯಿತಿಗಳಿಂದ ಪಾರ್ಲಿಮೆಂಟಿನವರೆಗೂ ಜಾತಿ ಆಧಾರದ ಮೇಲೆ ಜನನಾಯಕರ ಆಯ್ಕೆಯಾಗುತ್ತದೆ. ಭಾರತದಂತಹ ಜ್ಯಾತ್ಯಾತೀತ ರಾಷ್ಟ್ರದಲ್ಲಿ ಅಸ್ಪ್ರಶ್ಯತೆ ಎಂಬುದು ಇಂದಿಗೂ ಕಾಣಸಿಗುತ್ತದೆ. ಜಾತಿ ಸಂಕೋಲೆಯನ್ನು ತೊಡೆದು ಹಾಕಲು ಬಾಬಾಸಾಹೇಬರು ಬುದ್ಧನ ಮಾರ್ಗವನ್ನು ಅನುಸರಿಸಿದರು ಎಂದು ತಿಳಿಸಿದರು. ಚಿತ್ರನಟ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಚೇತನ್ ಕುಮಾರ್ ಸಮ್ಮೇಳನದ ದಿಕ್ಸೂಚಿ ಭಾಷಣಕಾರರಾಗಿ ಮಾತನಾಡುತ್ತಾ, ಶಿಕ್ಷಣ ಎಂಬ ಅಸ್ತ್ರದ ಮೂಲಕ ಪ್ರಬುದ್ಧ ಭಾರತ ನಿರ್ಮಾಣ ಅಂಬೇಡ್ಕರ್‌ಅವರ ಚಿಂತನೆಯಾಗಿತ್ತು. ಇದಕ್ಕಾಗಿಯೇ 1956ರಲ್ಲಿ ಅವರು ‘ಪ್ರಬುದ್ಧ ಭಾರತ’ ಎಂಬ ಪತ್ರಿಕೆಯನ್ನು ಆರಂಭಿಸಿ ಸಮಾನತೆಯ ಸಂದೇಶವನ್ನು ದೇಶದೆಲ್ಲೆಡೆ ಹರಡಲು ಯತ್ನಿಸಿದರು ಎಂದು ಹೇಳಿದರು. ಸಮ್ಮೇಳನದ ಸಂಚಾಲಕರಾದ ಪ್ರೊ.ಗೌರಿ ಮಾಣಿಕ್ ಮಾನಸ ಸಮ್ಮೇಳನದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಡಾ.ಸುಷ್ಮಾಜೋಗನ್ ನಿರೂಪಿಸಿದರು.ದೇಶದ ವಿವಿಧ ರಾಜ್ಯಗಳಿಂದ 100ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ವಿಶ್ವವಿದ್ಯಾಲಯದ ವಿವಿಧ ನಿಕಾಯಗಳ ಡೀನರು, ಮುಖ್ಯಸ್ಥರುಗಳು, ಬೋಧಕ-ಬೋಧಕೇತರ ಸಿಬ್ಬಂದಿ, ಸಂಶೋಧನಾ ವಿದ್ಯಾರ್ಥಿಗಳು ಇದ್ದರು.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 