ಯುವಜನೋತ್ಸವದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ತರಬೇತಿ
Practical training for female journalism students at Yuvajanotsava
ವಿಜಯಪುರ 28: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ 19ನೇ ಅಂತರ್ ಮಹಾವಿದ್ಯಾಲಯಗಳ ಯುವಜನೋತ್ಸವ ‘ಶಕ್ತಿ ಸಂಭ್ರಮ’ ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿನಿಯರು ಅತ್ಯಂತ ಕ್ರಿಯಾಶೀಲರಾಗಿ ಛಾಯಾಚಿತ್ರ, ವರದಿಗಾರಿಕೆ, ವಿಡಿಯೋಗ್ರಾಫಿ ಮಾಡುವ ಮೂಲಕ ವೃತ್ತಿಪರ ತರಬೇತಿ ಪಡೆದುಕೊಂಡರು.
ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳನ್ನು ಸೆರೆ ಹಿಡಿದು ವರದಿ ಮಾಡಿ ಮಾಧ್ಯಮಕ್ಕೆ ಕಳುಹಿಸುವ ಮೂಲಕ ಅತ್ಯುತ್ತಮ ಕವರೇಜ್ ಮಾಡಿದ್ದಾರೆ. ಅಷ್ಟೆ ಅಲ್ಲದೆ ಮಹಿಳಾ ಧ್ವನಿ ವಿಶೇಷ ಸಂಚಿಕೆ ಪ್ರಕಟಿಸಿದರು. ಅಕ್ಕ ಟಿವಿ ಮೂಲಕ ಮೂರೂ ದಿನಗಳ ಕಾರ್ಯಕ್ರಮದ ಲೈವ್ ಕವರೇಜ್ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಯುವಜನೋತ್ಸವ ‘ಶಕ್ತಿ ಸಂಭ್ರಮ’ದ ಸುದ್ದಿಗಳನ್ನು ಕ್ಷಣಕ್ಷಣಕ್ಕೂ ಎಲ್ಲೆಡೆ ತಲುಪಿಸುವಂತೆ ಮಾಡಿದ ಕೀರ್ತಿ ವಿದ್ಯಾರ್ಥಿನಿಯರಿಗೆ ಸಲ್ಲುತ್ತದೆ.
ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಹಾಯಕ ಪ್ರಾಧ್ಯಾಪಕರಾದ ಡಾ. ತಹಮೀನಾ ಕೋಲಾರ ಮತ್ತು ಸಂಶೋಧನಾ ವಿದ್ಯಾರ್ಥಿನಿಯರು ಪತ್ರಿಕೋದ್ಯಮ ವಿದ್ಯಾರ್ಥಿನಿಯರಿಗೆ ವಿವಿಧ ರೀತಿಯ ಪ್ರಾಯೋಗಿಕ ತರಬೇತಿ ನೀಡಿದರು. ತಾಂತ್ರಿಕ ಸಹಾಯಕ ನೀಲಕಂಠ ಹೆಗಡಿ ಮತ್ತು ಸಂಜಯ್ ರಾಠೋಡ ವಿದ್ಯಾರ್ಥಿನಿಯರಿಗೆ ತಾಂತ್ರಿಕ ನೆರವು ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 