ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಸೌಲಭ್ಯ ಪಡೆದುಕೊಳ್ಳಿ : ಜಿಲ್ಲಾಧಿಕಾರಿ ಡಾ.ಆನಂದ ಕೆ
Pradhan Mantri Shramayogi Man-Dhan avail facility: District Collector Dr. Ananda K
ವಿಜಯಪುರ ಫೆ.7 : ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಗೆ ಅರ್ಹರು ಈ ಸೌಲಭ್ಯ ಪಡೆದುಕೊಳ್ಳಲು ಜಿಲ್ಲೆಯಲ್ಲಿ ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ 800 ಕಾಮನ್ ಸರ್ವಿಸ್ ಸೆಂಟರ್ ಅಥವಾ ಜಿಲ್ಲಾದ್ಯಂತ ಆಯೋಜಿಸಲಾಗುವ ಶಿಬಿರಗಳಿಗೆ ತೆರಳಿ ಅರ್ಹರು ನೋಂದಣಿ ಮಾಡಿಕೊಳ್ಳಲು ಸೂಕ್ತ ಜಾಗೃತಿ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸೂಚನೆ ನೀಡಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಅಸಂಘಟಿತ ವಲಯದ ಕಾರ್ಮಿಕರನ್ನು, ಬೀದಿ ಬದಿ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ಸೇರಿದಂತೆ ವಿವಿಧ ಅಸಂಘಟಿತಿ ಕಾರ್ಮಿಕರು ನೋಂದಾಯಿಸಿಕೊಳ್ಳಲು ಮಾರ್ಚ್ 15ರವರೆಗೆ ವಿಶೇಷ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು. ವಯಸ್ಸಿಗೆ ಅನುಗುಣವಾಗಿ ಮಾಸಿಕವಾಗಿ 55 ರೂ.ನಿಂದ 200 ರೂ.ವರೆಗೆ ವಂತಿಕೆ ಪಾವತಿಸಬೇಕು. ಕೇಂದ್ರ ಸರ್ಕಾರದ ವತಿಯಿಂದ ಅಷ್ಟೇ ವಂತಿಕೆ ಪಾವತಿಸಿ ಬ್ಯಾಂಕ್ ಖಾತೆಯಲ್ಲಿ ಈ ಮೊತ್ತವನ್ನು ಸಂಗ್ರಹಿಸಲಾಗುತ್ತದೆ. 60 ವರ್ಷ ಪೂರ್ಣಗೊಂಡ ನಂತರ ಮಾಸಿಕ 3000 ರೂ.ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ.
ಈ ಯೋಜನೆಯಡಿ ನರೇಗಾ ಕಾರ್ಮಿಕರು, ಎಸ್ ಜಿಎಸ್ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಧ್ಯಾಹ್ನದ ಬಿಸಿ ಊಟದ ಕೆಲಸ ನಿರ್ವಹಿಸುವವರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮೀನುಗಾರರು, ಇನ್ನಿತರೆ ಅಸಂಘಟಿತ ವಲಯಗಳ ಕಾರ್ಮಿಕರು ಹಾಗೂ ವ್ಯಾಪಾರಿಗಳು ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬಹುದಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಸೂಕ್ತ ಸ್ಥಳಗಳಲ್ಲಿ ಶಿಬಿರ ಆಯೋಜನೆಗೆ ಮುಂದಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಸ್ಥರು,ಬಿಸಿ ಊಟದ ಕಾರ್ಮಿಕರು ನೋಂದಣಿ ಮಾಡಿಕೊಳ್ಳಲು ಅನುಕೂಲ ಒದಗಿಸುವ ನಿಟ್ಟಿನಲ್ಲಿ ಶಿಬಿರಗಳನ್ನು ಆಯೋಜನೆ ಮಾಡಬೇಕು. ತಾಲೂಕ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೋಂದಣಿ ಮಾಡಿಸುವತ್ತ ಕ್ರಮವಹಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಈರಯ್ಯ ಸಾಲಿಮಠ, ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಜಿಲ್ಲಾ ಪಂಚಾಯತಿಯ ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 