ಸಂಸದೀಯ ಸಲಹಾ ಸಮಿತಿಗೆ ಪ್ರಜ್ಞಾ ನೇಮಕ : ಸಾಮಾಜಿಕ ಜಾಲತಾಣದಲ್ಲಿ ವಿರೋಧ

 ನವದೆಹಲಿ, 21 ಬಿಜೆಪಿಯ ಸಂಸದೆ ಪ್ರಜ್ಞಾ ಠಾಕೂರ್ ಸಿಂಗ್ ಅವರನ್ನು ರಕ್ಷಣಾ ಸಚಿವಾಲಯದ ಸಂಸದೀಯ ಸಲಹಾ ಸಮಿತಿಗೆ ನೇಮಕ ಮಾಡಲಾಗಿದೆ.     ಅವರ ನೇಮಕಾತಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧಾಭಿಪ್ರಾಯಗಳು ಕೇಳಿ ಬರುತ್ತಿವೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷರಾಗಿರುವ 21 ಮಂದಿ ಸಂಸದೀಯ ಸಲಹಾ ಸಮಿತಿಗೆ ಮಾಲೇಗಾಂವ್ ಸ್ಫೋಟ ಪ್ರಕರಣದ ಆರೋಪ ಎದುರಿಸುತ್ತಿರುವ ಪ್ರಜ್ಞಾ ಠಾಕೂರ್ ಅವರನ್ನು ನೇಮಕ ಮಾಡಿರುವುದು ಹೊಸ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.    ಕಳೆದ ಲೋಕಸಭಾ ಚುನಾವಣೆಯಲ್ಲಿ ಭೋಪಾಲ್ ಕ್ಷೇತ್ರದಿಂದ ಸ್ಪಧರ್ೆ ಮಾಡಿದ್ದ ಪ್ರಜ್ಞಾ, ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಅವರನ್ನು ಪರಾಭವಗೊಳಿಸಿ ಆಯ್ಕೆಯಾಗಿದ್ದರು.     ಮಹಾತ್ಮಾ ಗಾಂಧಿ ಹತ್ಯೆಗೆ ಕಾರಣವಾದ ನಾಥೂರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಹೇಳುವ ಮೂಲಕ ಪ್ರಜ್ಞಾ ಸಿಂಗ್ ಠಾಕೂರ್ ದೇಶದಲ್ಲಿ ವಿವಾದದ ಅಲೆ ಎಬ್ಬಿಸಿದ್ದರು. ಜೊತೆಗೆ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿ ಕ್ಷಮೆ ಕೋರುವಂತೆ ಪಕ್ಷದಿಂದ ಶೋಕಾಸ್ ನೋಟಿಸ್ ಕೂಡ ಪಡೆದಿದ್ದರು.