ಅರುಣ್ ಜೇಟ್ಲಿ ನಿಧನಕ್ಕೆ ಪ್ರಣಬ್ ಮುಖರ್ಜಿ ಸಂತಾಪ

 ಕೋಲ್ಕತಾ, ಆಗಸ್ಟ್ 24    ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಅಕಾಲಿಕ ನಿಧನಕ್ಕೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸಂತಾಪ ವ್ಯಕ್ತಪಡಿಸಿದ್ದಾರೆ. 

 ಅರುಣ್ ಜೇಟ್ಲಿಯವರ ಅಕಾಲಿಕ ನಿಧನ ತೀವ್ರ ದುಃಖ ಉಂಟು ಮಾಡಿದೆ. ಒಂದು ದಿನ ಮೊದಲು ಅವರನ್ನು ಭೇಟಿ ಮಾಡಿ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಪ್ರಾರ್ಥಿಸಿದ್ದೆ ಎಂದು ಮುಖರ್ಜಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ. 

 ಅವರು ಆಳವಾದ ಬುದ್ಧಿಶಕ್ತಿ ಮತ್ತು ಜ್ಞಾನವನ್ನು ಹೊಂದಿದ್ದ ನಾಯಕರಾಗಿದ್ದರು ಮತ್ತು ತರ್ಕಬದ್ಧ ಧ್ವನಿಯಾಗಿದ್ದರು. ಅವರನ್ನು ಕಳೆದುಕೊಂಡಿದ್ದೇವೆ ಎಂದು ಮುಖರ್ಜಿ ಹೇಳಿದ್ದಾರೆ. 

     ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಮುಖರ್ಜಿ ಹೇಳಿದ್ದಾರೆ.