‘ವಾಕ್‌ಥಾನ್ ಸ್ಪರ್ಧೆ’ಯಲ್ಲಿ ಪ್ರಶಾಂತ ನಾಯ್ಕಗೆ ದ್ವಿತೀಯ ಸ್ಥಾನ
Prashanth Nayak wins second place in 'Walkathon Competition'
ಕಾರವಾರ 15: ನಗರದ ರೋಟರಿ ಕ್ಲಬ್ (ಪಶ್ಚಿಮ) ರವರು ಸಂಘಟಿಸಿದ 10 ಕಿ.ಮಿ. ನಡಿಗೆಯ “ವಾಕ್‌ಥಾನ್” ಸ್ಪರ್ಧೆಯಲ್ಲಿ ಬಾಲಮಂದಿರ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ ರಾಮಚಂದ್ರ ನಾಯ್ಕ ಇವರು ದ್ವಿತೀಯ ಸ್ಥಾನವನ್ನು ಪಡೆದು ಟ್ರೋಪಿ ಮತ್ತು 3000 ರೂಪಾಯಿ ಬಹುಮಾನವನ್ನು ಪಡೆದಿರುತ್ತಾರೆ. ಇವರ ಈ ಸಾಧನೆಯನ್ನು ಮೆಚ್ಚಿ ಹಾಗೂ ವಿವಿಧ ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಇವರು ಭಾಗವಹಿಸಿ ಬಹುಮಾನ ಗಳಿಸಿದ್ದಕ್ಕಾಗಿ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.
ಈ ಸಾಧನೆಗೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತ ಮಂಡಳಿಯವರು ಹಾಗೂ ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಅಂಜಲಿ ಎಸ್. ಮಾನೆ ಹಾಗೂ ವಿದ್ಯಾರ್ಥಿಗಳು ಮತ್ತು ಪಾಲಕರು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿರುತ್ತಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 