ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಸಹಕಾರಿ
Pratibha Karanji is helpful for personality development of children
ಹೂವಿನ ಹಡಗಲಿ 12: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಹೇಳಿದರು.ಪಟ್ಟಣದ ವಿದ್ಯಾಂಜಲಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿ ಮಕ್ಕಳ ವ್ಯಕ್ತಿತ್ವ ವಿಕಾಸಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉತ್ತಮ ವೇದಿಕೆ ಎಂದರು. ಶಿಕ್ಷಕರ ಸಂಘದ ಕಾರ್ಯದರ್ಶಿ ವಿ ಎಚ್ ಯೇಸು ಮಾತನಾಡಿ ಗಾಯನ ಅಭಿನಯ ನೃತ್ಯ ವಿವಿಧ ಪ್ರಕಾರಗಳ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಶಿಕ್ಷಕರು ಕೆಲಸ ಮಾಡಬೇಕಾಗಿದೆ ಎಂದರು.ವಿದ್ಯಾಂಜಲಿ ಶಾಲೆಯ ಸಂಸ್ಥೆ ಅಧ್ಯಕ್ಷ ಎಂ ಎಂ ಗುರುಬಸವರಾಜ ಮಕ್ಕಳಿಗೆ ನೈತಿಕತೆ ಸಾಂಸ್ಕೃತಿಕ ವಾತಾವರಣ ಶಾಲೆಯಲ್ಲಿ ಕಲ್ಪಿಸಬೇಕು ಎಂದರು.ನಿಕಟ ಪೂರ್ವ ಸಿ ಆರ್ ಪಿ ಚನ್ನವೀರನ ಗೌಡ, ಸಿ ಆರ್ ಪಿ ವೀರೇಶ್ ಬಿ, ಬಿ ಆರ್ ಪಿ ಬಸವರಾಜ ಕೆ, ಗೌಡರ ಹೊನ್ನಪ್ಪ ಎಂ ಸರೋಜಮ್ಮ, ಕೊಟ್ರೇಶ್,ಎಂ ಎಂ ಸುನಂದಾ ಇತರರು ಉಪಸ್ಥಿತರಿದ್ದರು.ಪಟ್ಟಣದ ಸರ್ಕಾರಿ ಅನುದಾನಿತ ಅನುದಾನರಹಿತ ಪ್ರಾಥಮಿಕ ಶಾಲಾ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 