ಹುಟ್ಟುಹಬ್ಬದ ಅಂಗವಾಗಿ ಶಾಲಾ ವಿದ್ಯಾರ್ಥಿನಿಯರಿಗೆ ಬ್ಯಾಗ್ ವಿತರಣೆ: ಮಾನವೀಯತೆ ಮೆರೆದ ಪ್ರವೀಣ್ ಕತ್ತಿ
Praveen Katti shows humanity by distributing bags to schoolgirls on their birthday
ಬೆಳಗಲಿ 11 : ಪ್ರಚಲಿತ ದಿನಗಳಲ್ಲಿ ಹುಟ್ಟುಹಬ್ಬಗಳನ್ನು ಕೇವಲ ಆಡಂಬರ, ಪಾರ್ಟಿಗಳಿಗೆ ಸೀಮಿತಗೊಳಿಸದೆ, ಸಾಮಾಜಿಕ ಕಳಕಳಿಯೊಂದಿಗೆ ಆಚರಿಸಿಕೊಳ್ಳುವ ಮೂಲಕ ಪ್ರವೀಣ್ ಕತ್ತಿ ಕುಟುಂಬಸ್ಥರು ಇತರರಿಗೆ ಮಾದರಿಯಾಗಿದ್ದಾರೆ. ಕುಮಾರಿ ರೋಹಿಣಿ ಪ್ರವೀಣ್ ಕತ್ತಿ ಅವರ ಹುಟ್ಟುಹಬ್ಬದ ಸವಿನೆನಪಿಗಾಗಿ ’ರೋಹಿಣಿ ವಿದ್ಯಾಧಾರೆ’ ಕಾರ್ಯಕ್ರಮದಡಿ ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶಾಲಾ ಬ್ಯಾಗ್ಗಳನ್ನು ವಿತರಿಸಲಾಯಿತು.
ಗ್ರಾಮದ ಪ್ರಮುಖರು, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಮ್ಮುಖದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಸರಳ ಹಾಗೂ ಅರ್ಥಪೂರ್ಣ ಸಮಾರಂಭದಲ್ಲಿ ಶಾಲೆಯ ನೂರಾರು ವಿದ್ಯಾರ್ಥಿನಿಯರಿಗೆ ಬ್ಯಾಗ್ಗಳನ್ನು ವಿತರಿಸಿ, ರೋಹಿಣಿ ಅವರಿಗೆ ಸುದೀರ್ಘ ಆಯುಷ್ಯ ಹಾಗೂ ಉಜ್ವಲ ಭವಿಷ್ಯ ಸಿಗಲಿ ಎಂದು ಹಾರೈಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, "ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಇಂತಹ ಸತ್ಕಾರ್ಯಗಳು ಶ್ಲಾಘನೀಯ. ಬಡ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ನೆರವಾಗುವ ನಿಟ್ಟಿನಲ್ಲಿ ಕತ್ತಿ ಕುಟುಂಬದವರು ಕೈಗೊಂಡಿರುವ ಈ ಕಾರ್ಯಕ್ರಮ ಇತರರಿಗೂ ಪ್ರೇರಣೆಯಾಗಿದೆ," ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಆದ ಎಂ.ಹೆಚ್ ಪಾಟೀಲ್ ಶಿಕ್ಷಕ ವೃಂದದವರು ಆದ ಬಂಡಿ, ಜೋಷಿ, ಮಾದರ, ದಂಡಿನ ಎಸ್‌ಡಿಎಂಸಿ ಅಧ್ಯಕ್ಷರು ಆದ ಯಮನಪ್ಪ ಆಲಗೂರ, ಗ್ರಾಮದ ಹಿರಿಯರು ಆದ ವೆಂಕಣ್ಣ ಒಂಟಗೋಡಿ, ಭೀಮಶಿ ಜಂಬಗಿ, ಸದಾಶಿವ ಹಳ್ಳೂರ, ಸದಾಶಿವ ಪೂಜೇರಿ ಪಾಲಕರು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಕೊನೆಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಲಾಯಿತು.
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು 