ಬೆಂಗಳೂರು, ಫೆ 1 -ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿರುವ ಪ್ರವೀಣ್ ಸೂದ್ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ರಾಜ್ಯದ ಪೊಲೀಸ್ ವ್ಯವಸ್ಥೆಯ ಮುಖ್ಯಸ್ಥರಾದ ನಂತರ ಔಪಚಾರಿಕವಾಗಿ ಭೇಟಿ ಮಾಡಿ ಪುಷ್ಪಗುಚ್ಚ ನೀಡಿ ಶುಭ ಕೋರಿದರು. ಯಡಿಯೂರಪ್ಪ ಅವರು ಸಹ ಪ್ರವೀಣ್ ಸೂದ್ ಅವರಿಗೆ ಪುಷ್ಪಗುಚ್ಚ ನೀಡಿ ಶುಭ ಹಾರೈಸಿದರು.ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಉಪಸ್ಥಿತರಿದ್ದರು.