ಹೊಳೆಮ್ಮನಿಗೆ 125 ಇಡುಗಾಯಿ ಅರ್ಿಸಿ ಪ್ರಾರ್ಥನೆ
Pray to Holemma for 125 days
ಲೋಕದರ್ಶನ ವರದಿ
ಶಿರಹಟ್ಟಿ 30: ರಾಜ್ಯ ಸಚಿವ ಸಂಪುಟದ ಎರಡನೇ ಹಂತದ ವಿಸ್ತರಣೆಯಲ್ಲಿ ಹಿರಿಯ ಕಾಂಗ್ರೆಸ್ ನಾಯಕ, ಅಭಿವೃದ್ಧಿಯ ಹರಿಕಾರ ಹಾಗೂ ಜನಪರ ರಾಜಕಾರಣಿ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು 125 ಇಡುಗಾಯಿಗಳನ್ನು ಒಡೆದು ವಿಶಿಷ್ಟ ರೀತಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಮಂಗಳವಾರ ತಾಲೂಕಿನ ಶ್ರೀಮಂತಗಡದ ಹೊಳಲಮ್ಮದೇವಿ ದೇವಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ನಾಯಕರು ಹಾಗೂ ಅಭಿಮಾನಿಗಳು ರಾಜ್ಯದ ಅಭಿವೃದ್ಧಿಗೆ ಅನುಭವಿಗಳಾದ ನಾಯಕರ ಸೇವೆ ಅಗತ್ಯವಾಗಿದ್ದು, ಎಚ್.ಕೆ. ಪಾಟೀಲ ಅವರಂತಹ ಹಿರಿಯ ನಾಯಕರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡುವುದು ಸರ್ಕಾರಕ್ಕೂ ಹಾಗೂ ರಾಜ್ಯದ ಜನರಿಗೂ ಪ್ರಯೋಜನಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಗುರುನಾಥ ದಾನಪ್ಪನವರ ಮಾತನಾಡಿ, ಎಚ್.ಕೆ. ಪಾಟೀಲ ಅವರು ಹಲವು ದಶಕಗಳಿಂದ ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕತೆ, ಅಭಿವೃದ್ಧಿ ಹಾಗೂ ಜನಸೇವೆಗೆ ಮಾದರಿಯಾಗಿದ್ದಾರೆ. ಶಿರಹಟ್ಟಿ ತಾಲ್ಲೂಕು ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ರಸ್ತೆ, ಸೇತುವೆ, ಕುಡಿಯುವ ನೀರು, ಶಾಲಾ-ಕಾಲೇಜುಗಳ ಅಭಿವೃದ್ಧಿ, ಆರೋಗ್ಯ ಸೇವೆ, ನೀರಾವರಿ ಯೋಜನೆಗಳು ಹಾಗೂ ವಿವಿಧ ಮೂಲಸೌಕರ್ಯ ಕಾಮಗಾರಿಗಳ ಮೂಲಕ ಜನರ ಬದುಕಿನಲ್ಲಿ ಬದಲಾವಣೆ ತರಲು ಅವರು ಮಹತ್ವದ ಕೊಡುಗೆ ನೀಡಿದ್ದಾರೆ. ಜನರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ, ಸಮಸ್ಯೆಗಳ ಪರಿಹಾರಕ್ಕಾಗಿ ಸದಾ ಶ್ರಮಿಸುವ ನಾಯಕ ಎಂಬ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.
ಎಚ್.ಕೆ. ಪಾಟೀಲ ಅವರು ಈ ಹಿಂದೆ ವಿವಿಧ ಇಲಾಖೆಗಳ ಸಚಿವರಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಆಡಳಿತದಲ್ಲಿ ಪಾರದರ್ಶಕತೆ, ಅಭಿವೃದ್ಧಿಗೆ ಆದ್ಯತೆ ಹಾಗೂ ಜನಪರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಉತ್ತಮ ಆಡಳಿತಗಾರರಾಗಿ ಗುರುತಿಸಿಕೊಂಡಿದ್ದಾರೆ. ಅವರ ಅನುಭವ ಮತ್ತು ಆಡಳಿತಾತ್ಮಕ ಸಾಮರ್ಥ್ಯ ರಾಜ್ಯ ಸರ್ಕಾರಕ್ಕೆ ಇಂದಿಗೂ ಅಗತ್ಯವಾಗಿದೆ ಎಂದು ತಿಳಿಸಿದರು.
ಶ್ರೀ ಹೊಳಲಮ್ಮ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೂ ಎಚ್.ಕೆ. ಪಾಟೀಲ ಅವರು ಸುಮಾರು 2 ಕೋಟಿ ಅನುದಾನ ನೀಡುವ ಮೂಲಕ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೂ ಕೈಜೋಡಿಸಿದ್ದಾರೆ. ದೇವಾಲಯದ ಅಭಿವೃದ್ಧಿಯಲ್ಲಿ ಅವರ ಕೊಡುಗೆಯನ್ನು ಸ್ಥಳೀಯರು ಇಂದಿಗೂ ಕೃತಜ್ಞತೆಯಿಂದ ಸ್ಮರಿಸುತ್ತಿದ್ದಾರೆ. ಧಾರ್ಮಿಕ, ಸಾಮಾಜಿಕ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ಸಮಾನ ಆಸಕ್ತಿ ಹೊಂದಿರುವ ನಾಯಕ ಎಚ್.ಕೆ. ಪಾಟೀಲ ಎಂದು ಅವರು ಬಣ್ಣಿಸಿದರು.
ಕಾಂಗ್ರೆಸ್ ಯುವ ಮುಖಂಡ ಪಕ್ಕೀರೇಶ ಮ್ಯಾಟಣ್ಣವರ ಮಾತನಾಡಿ, ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಯಲ್ಲಿ ಎಚ್.ಕೆ. ಪಾಟೀಲ ಅವರಿಗೆ ಸೂಕ್ತ ಸ್ಥಾನಮಾನ ನೀಡಿ ಸಚಿವರನ್ನಾಗಿ ನೇಮಕ ಮಾಡಬೇಕು. ಉತ್ತರ ಕರ್ನಾಟಕ ಭಾಗದ ಜನರ ನೀರೀಕ್ಷೆಯೂ ಇದೇ ಆಗಿದ್ದು, ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದೆ ಎಂದು ಹೇಳಿದರು.
ಬಳಿಕ ಹೊಳಲಮ್ಮ ದೇವಿಯ ಸನ್ನಿಧಿಯಲ್ಲಿ 125 ಇಡುಗಾಯಿಗಳನ್ನು ಒಡೆದು ವಿಶೇಷ ಪೂಜೆ ಸಲ್ಲಿಸಲಾಯಿತು. ರಾಜ್ಯದ ಅಭಿವೃದ್ಧಿ, ಜನರ ಸುಖ-ಶಾಂತಿ ಹಾಗೂ ಎಚ್.ಕೆ. ಪಾಟೀಲ ಅವರಿಗೆ ಸಚಿವ ಸ್ಥಾನ ದೊರೆಯಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ವಿಶಿಷ್ಟ ಧಾರ್ಮಿಕ ಆಚರಣೆ ಸಾರ್ವಜನಿಕರ ಗಮನ ಸೆಳೆಯಿತು.
ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಚನ್ನಪ್ಪ ಜಗಲಿ, ಸಿಂಡಿಕೇಟ ನಾಮನಿರ್ದೇಶನ ಸದಸ್ಯ ದೃವರಾಜ ಹೊನ್ನಪ್ಪನವರ, ತಿಪ್ಪಣ್ಣ ಸಂಶಿ, ಫಕೀರೇಶ ನಡುವಿನಕೇರಿ, ಹಮೀದ ಸನದಿ, ರಘು ಶೆಟ್ಟಡ್ಡಿ, ನಾಗರಾಜ ಪೋತರಾಜ, ಜಗದೀಶ ಹುಲಿಗೆಮ್ಮನವರ, ಪ್ರಕಾಶ ಹೋರಿ, ಚಂದ್ರು ಪೋತರಾಜ ಮತ್ತಿತರರು ಉಪಸ್ಥಿತರಿದ್ದರು.
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು 