ಸಾಂಸ್ಕೃತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿಯ ಪೂರ್ವಭಾವಿ ಸಭೆ
Pre-meeting for the birth anniversary of cultural leader Jagajyoti Sri Basaveshwara
ಲೋಕದರ್ಶನ ವರದಿ
ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ : ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್.
ಗದಗ 8: ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಏಪ್ರಿಲ್ 20 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಅರ್ಥಪೂರ್ಣವಾಗಿ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಕ್ರಮವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಬುಧವಾರ ಸಾಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರ ಜಯಂತಿ ಕುರಿತು ಜರುಗಿದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರ ಮಾತನಾಡಿದರು.
ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅದ್ಯಕ್ಷತೆಯಲ್ಲಿ ಜಯಂತಿಯ ಆಚರಣೆಗೆ ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ , ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಹಾಗೂ ಸಮಾಜದ ಹಿರಿಯರಿಗೆ ಸನ್ಮಾನಿಸುವ ಕಾರ್ಯಕ್ರಮ ಜಯಂತಿ ಕಾರ್ಯಕ್ರಮದಲ್ಲಿ ಜರುಗಲಿದೆ. ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಬಸವೇಶ್ವರರ ಕುರಿತು ಆಳವಾಗಿ ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.
ಸಾಂಸ್ಕೃತಿಕ ನಾಯಕ ಜಗಜ್ಯೋತಿ ಶ್ರೀ ಬಸವೇಶ್ವರ ಜಯಂತಿ ವಿಚಾರಧಾರೆಗಳು ಸರ್ವರಿಗೂ ತಲುಪುವ ಕಾರ್ಯವಾಗಬೇಕು. ವಚನಗಳ ಮೂಲಕ ಸಮಾಜದ ಕಲ್ಯಾಣಕ್ಕಾಗಿ ಶ್ರಮಿಸಿದ ಜಗಜ್ಯೋತಿ ಬಸವೇಶ್ವರರ ತತ್ವಾದರ್ಶಗಳನ್ನು ಎಲ್ಲರಿಗೂ ತಿಳಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳೊಂದಿಗೆ ಸಮಾಜದ ಹಿರಿಯರು, ಗಣ್ಯರು, ವಿವಿಧ ಸಂಘಟನೆಗಳು ಜಯಂತಿಯ ಯಶಸ್ವಿಗೆ ಕೈಜೋಡಿಸಬೇಕೆಂದರು.
ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ, ಕಲಾ ತಂಡಗಳ ಆಯ್ಕೆ ಪ್ರಬಂಧ ಸ್ಪರ್ಧೆ ಆಯೋಜನೆ, ಸ್ತಬ್ದ ಚಿತ್ರ ಮೆರವಣಿಗೆ ಕುರಿತು ಚರ್ಚಿಸಲಾಯಿತು. ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಮೆರವಣಿಗೆಯ ಆಯೋಜನೆ ಕುರಿತು ವಿವಿಧ ಮುಖಂಡರು ತಮ್ಮ ತಮ್ಮ ಸಲಹೆಗಳನ್ನು ಸಭೆಯ ಗಮನಕ್ಕೆ ತಂದರು.
ಸಭೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಸಮಾಜದ ಮುಖ್ಯಸ್ಥರು, ಗಣ್ಯರು ಹಿರಿಯರು ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಬಸವರಾಜ.ವ್ಹಿ. ಬಳ್ಳಾರಿ ಸರ್ವರನ್ನು ಸ್ವಾಗತಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 