ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆ
ಧಾರವಾಡ 01: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಾರ್ಚ್ 12 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ರೇಣುಕಾಚಾರ್ಯ ಜಯಂತಿ ಹಾಗೂ ಮಾರ್ಚ್ 14 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿಯನ್ನು ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಮತ್ತು ಮಾರ್ಚ್ 28 ರಂದು ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ. ಅಗ್ನಿಬನ್ನಿರಾಯಸ್ವಾಮಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.