ಮುಂಗಾರು ಪೂರ್ವ ಮಳೆ ಆರಂಭ: ರೈತರಿಂದ ಬಿತ್ತನೆಗೆ ಭರದ ಸಿದ್ಧತೆ
Pre-monsoon rains begin: Farmers prepare in full swing for sowing
ಲೋಕದರ್ಶನ ವರದಿ
ಮಾಂಜರಿ 23: ತಾಲೂಕಿನಾದ್ಯಂತ ಮುಂಗಾರು ಪೂರ್ವ ಮಳೆ ಆರಂಭವಾಗಿರುವುದರಿಂದ ರೈತರು ಮುಂಗಾರು ಬಿತ್ತನೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಭೂಮಿ ಹದಗೊಳಿಸುವ ಜೊತೆಗೆ ಕೃಷಿ ಪರಿಕರಗಳ ದುರಸ್ತಿ ಹಾಗೂ ಸ್ವಚ್ಛತೆಯಲ್ಲಿ ನಿರತರಾಗಿದ್ದಾರೆ. ರೈತರ ನಂಬಿಗಸ್ತ ಮಳೆ ರೋಹಿಣಿ ಮೇ 25 ರಿಂದ ಪ್ರಾರಂಭವಾಗುತ್ತಿದ್ದು, ಈ ರೋಹಿಣಿ ಮಳೆ ಕೈ ಹಿಡಿದರೆ ಬದುಕು ಬಂಗಾರವಾಗುತ್ತದೆ ಎಂಬ ಆಸೆಯಿಂದ ರೈತ ಕುಳಿತ್ತಿದ್ದು, ಪ್ರತಿ ಬಾರಿಯೂ ಮಳೆಗಾಗಿ ಕಾಯುವ ರೈತರು ಬಿತ್ತನೆ ಬೀಜವನ್ನಿಟ್ಟುಕೊಂಡು ಆಕಾಶದತ್ತ ಮುಖ ಮಾಡಿರುವುದು ಸರ್ವೇ ಸಾಮಾನ್ಯ.
ರೈತರು ಬಿತ್ತನೆಗೆ ಬೇಕಾದ ಕುಂಟೆ, ಪಲಗಾ, ಕೂರಿಗೆ, ನೊಗ, ಬುಕ್ಕಾ ಸಿದ್ಧತೆಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬಡಿಗೇರ ಹಾಗೂ ಕಮ್ಮಾರರ ಬಳಿ ತಮ್ಮ ಪರಿಕರಗಳ ದುರಸ್ಥಿ ಮಾಡಿಸಿಕೊಂಡು ಬಿತ್ತನೆಗೆ ಸಿದ್ಧವಾಗಿದ್ದಾರೆ. ಕೆಲವು ಭಾಗ ಕೃಷ್ಣಾ ನದಿಯ ನೀರನ್ನು ಅವಲಂಬಿಸಿದರೆ ಕೆಲವು ಭಾಗ ಮಳೆ ಹಾಗೂ ಘಟಪ್ರಭಾ ಎಡದಂಡೆ ಕಾಲುವೆಯನ್ನು ಅವಲಂಬಿಸಿದ್ದಾರಮುಂಗಾರು ಬೆಳೆಗಳಾದ ದ್ವಿದಳ ದಾನ್ಯಗಳಾದ ಸೋಯಾಬೀನ್, ಬೆಳೆ, ಉದ್ದು, ಹೆಸರು, ಮಡಿಕೆಕಾಳು ಸೇರಿದಂತೆ ವಿವಿಧ ಬೆಳೆಗಳ ಜೊತೆ ವಾಣಿಜ್ಯ ಬೆಳೆಗಳಾದ ಕಬ್ಬು ಹಾಗೂ ಅರಿಶಿಣ ಬಿತ್ತನೆ ಮಾಡಲು ರೈತರು ಚಟುವಟಿಕೆ ಪ್ರಾರಂಭಿಸಿದ್ದಾರೆ.
ಬಿತ್ತನೆ ಗುರಿ: ಚಿಕ್ಕೋಡಿ ತಾಲೂಕಿನಲ್ಲಿ ಈ ಬಾರಿ ಮುಂಗಾರು ಹಂಗಾಮಿಗೆ ಗೋವಿನ ಜೋಳ 8900 ಹೆಕ್ಟೇರ್ ಪ್ರದೇಶ, ತೊಗರಿ 1000 ಹೆಕ್ಟೇರ್ ಪ್ರದೇಶ, ಹುರುಳಿ 10 ಹೆಕ್ಟೇರ್, ಹೆಸರು 800 ಹೆಕ್ಟೇರ್, ಉದ್ದು 300 ಹೆಕ್ಟೇರ್, ಅವರೆ 20 ಹೆಕ್ಟೇರ್, ಶೇಂಗಾ 100 ಹೆಕ್ಟೇರ್, ಸೂರ್ಯಕಾಂತಿ 500 ಹೆಕ್ಟೇರ್, ಸೋಯಾಬೀನ್ 200 ಹೆಕ್ಟೇರ್, ಕಬ್ಬು ಪಿ 3750 ಹೆಕ್ಟೇರ್, ಕಬ್ಬು ಹೆಚ್ 12500 ಹೆಕ್ಟೇರ್, ಒಟ್ಟು 28080 ಹೆಕ್ಟೇರ ಪ್ರದೇಶದಲ್ಲಿ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 