ವಿವಿಧ ಜಯಂತಿಗಳ ಪೂರ್ವ ಸಿದ್ದತಾ ಸಭೆ
Pre-preparatory meeting for various jayantis
ಬೆಳಗಾವಿ, ಫೆ.06: ಫೆಬ್ರುವರಿ ಮಾಹೆಯಲ್ಲಿ ಜರುಗಲಿರುವ ಶ್ರೀ.ಸಂತ ಸೇವಾಲಾಲ ಜಯಂತಿ, ಛತ್ರಪತಿ ಶಿವಾಜಿ ಮಹಾರಜ ಜಯಂತಿ ಹಾಗೂ ತ್ರಿಪದಿ ಕವಿ ಸರ್ವಜ್ಞರ ಜಯಂತಿ ಆಚರಣೆ ಕುರಿತು ಪೂರ್ವಸಿದ್ಧತಾ ಸಭೆಯು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ (ಫೆ.6) ಜರುಗಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿಗಳಾದ ವಿಜಯಕುಮಾರ ಹೊನಕೇರಿ ಅವರು ಮಾತನಾಡಿ ಫೆ. 15 ರಂದು ಶ್ರೀ.ಸಂತ ಸೇವಾಲಾಲ ಜಯಂತಿ, ಫೆ. 19ರಂದು ಛತ್ರಪತಿ ಶಿವಾಜಿ ಮಹಾರಜ ಜಯಂತಿ ಹಾಗೂ ಪೇ. 20 ರಂದು ತ್ರಿಪದಿ ಕವಿ ಸರ್ವಜ್ಞರ ಜಯಂತಿ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಸೂಚಿಸಿದರು.ಪ್ರತಿ ವರ್ಷದಂತೆ ಮೆರವಣಿಗೆ, ಕಲಾ ಕಲಾತಂಡಗಳ ಪ್ರದರ್ಶನ, ಉಪನ್ಯಾಸಕರ ನೇಮಕ, ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ಅಗತ್ಯದ ಕ್ರಮ ಕೈಗೊಳ್ಳಬೇಕು. ಫೆ. 15 ಹಾಗೂ ಫೆ.20 ರಂದು ಜರುಗಲಿರುವ ಸಂತಸೇವಾಲಾಲ ಜಯಂತಿ ಹಾಗೂ ತ್ರಿಪದಿ ಕವಿ ಸರ್ವಜ್ಞ ಜಯಂತಿಯನ್ನು ಕುಮಾರ ಗಂಧರ್ವ ರಂಗಮಂದಿರದಲ್ಲಿ ಆಯೋಜಿಸಲು ಹಾಗೂ ಫೆ.19 ರಂದು ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮವನ್ನು ಕಪಿಲೇಶ್ವರ ರಸ್ತೆಯ ಶಿವಾಜಿ ಉದ್ಯಾನವನದಲ್ಲಿ ಆಯೋಜನೆಗೆ ಅಗತ್ಯದ ಸಿದ್ದತೆ ಮಾಡಿಕೊಳ್ಳಬೇಕು.
ಕಾರ್ಯಕ್ರಮದ ಕುರಿತಂತೆ ಆಮಂತ್ರಣ ಪತ್ರಿಕೆಗಳನ್ನು ಶಿಷ್ಟಾಚಾರದ ಅನ್ವಯ ಸಾಕಷ್ಟು ಮುಂಚಿತವಾಗಿ ಮುದ್ರಿಸಿ ಜನಪತ್ರಿನಿಧಿಗಳಿಗೆ ಹಾಗೂ ಗಣ್ಯರಿಗೆ ತಲುಪಿಸಲು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಸಮುದಾಯಗಳ ಮುಖಂಡರುಗಳು, ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 