ಹಾವೇರಿಯಲ್ಲಿ ವಿಕಲಚೇತನ ಮಹಿಳೆಯರಿಗೆ ಅತಂತ್ರ ಸ್ಥಿತಿ: ಜಿಲ್ಲಾಡಳಿತಕ್ಕೆ ಮನವಿ
Precarious situation for differently-abled women in Haveri: Appeal to district administration
ಹಾವೇರಿ 09: ವಿಕಲಚೇತನರಿಗೆ ಪುನರ್ ವಸತಿ ಮತ್ತು ಸೌಲಭ್ಯಗಳನ್ನು ಕಲ್ಪಿಸಲು ಒತ್ತಾಯಿಸಿ, ಮತ್ತೆ ಅನ್ಯಾಯ ವೆಸಗಿದ ಕಲ್ಮೇಶ್ವರ ಸಂಸ್ಥೆ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ, ಶಾಶ್ವತ ಪರಿಹಾರಕ್ಕಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಬೆಂಬಲದೊಂದಿಗೆ ವಿಕಲಚೇತನರು ಮಾನ್ಯ ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಅವರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮನವಿ ಪತ್ರ ಸಲ್ಲಿಸಿದರು.ಹತ್ತಾರು ವರ್ಷಗಳಿಂದ ಆಶ್ರಯ ನೀಡಿ ಅನೇಕ ವಿಕಲಚೇತನ ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಶಿಕ್ಷಣ, ಉದ್ಯೋಗ ಸೇರಿದಂತೆ ಸ್ವತಂತ್ರರಾಗಿ ಘನತೆ ಬದುಕು ಕಟ್ಟಿಕೊಳ್ಳಲು ಸಹಾಯಕಾರಿಯಾಗಿದ್ದ ಕಲ್ಮೇಶ್ವರ ವಿದ್ಯಾ ಸಂಸ್ಥೆಯು ಸರ್ಕಾರದ ಯಾವುದೇ ಆದೇಶಗಳಿಲ್ಲದೆ ಮತ್ತೆ ವಸತಿ ನಿಲಯದಲ್ಲಿದ್ದ ಐದು ಜನ ವಿಕಲಚೇತನರನ್ನು ಹೊರದೂಡುವ ಕಾರ್ಯವನ್ನು ಎಸ್ಎಫ್ಐ ಹಾವೇರಿ ಜಿಲ್ಲಾ ಸಮಿತಿಯು ಹಾಗೂ ಅಂಗವಿಕಲರ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ.
ವಿದ್ಯಾರ್ಥಿನಿ ಹೇಮಾ ಪ್ರಕಾಶ್ ಮಾತನಾಡಿ, ನೂರಾರು ಕನಸುಗಳನ್ನು ಕಟ್ಟಿಕೊಂಡು ಸ್ವಂತ ಕಾಲಮೇಲೆ ನಿತ್ತು ಘನತೆ ಜೀವನವನ್ನು ರೂಪಿಸಿಕೊಳ್ಳಬೇಕೆಂಬ ಆಸೆಗೆ ಆಶ್ರಯ ಬೇಕಿದೆ. ಬಾಡಿಗೆ ಮನೆ ಸಿಗುತ್ತಿಲ್ಲ ಎಂದು ಸಂಸ್ಥೆ ಮುಖ್ಯಸ್ಥರು ನಿಮ್ಮ ಮನೆಗಳಿಗೆ ಹೋಗಿ ಎಂದಿದ್ದಾರೆ. ಮನೆಗೆ ಹೋದರೆ ಸಮಾಜದಲ್ಲಿ ಬದುಕುವುದು ಬಹಳಷ್ಟು ಕಷ್ಟವಾಗುತ್ತದೆ. ಬಸ್ ಗಳಲ್ಲಿ, ರಸ್ತೆಗಳಲ್ಲಿ ವಿಪರೀತ ಜನಸಂದಣಿಯ ಮಧ್ಯೆ ಓಡಾಡಲು ಕಷ್ಟವಾಗುತ್ತದೆ.ಈ ಹಿಂದೆ ಎಸ್ಎಫ್ಐ ಹೋರಾಟ ಹಾಗೂ ಮಾಧ್ಯಮದವರು ವರದಿ ಮಾಡುವ ಸುದ್ದಿ ತಿಳಿದು ಸ್ಥಳಕ್ಕೆ ದಾವಿಸಿದ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಶ್ರೀನಿವಾಸ ಅಲದರ್ತಿ ಅವರು ಕಲ್ಮೇಶ್ವರ ಸಂಸ್ಥೆ ಮುಖ್ಯಸ್ಥ ದಯಾನಂದ ಅವರಿಗೆ ದೂರವಾಣಿ ಸಂಪರ್ಕ ಮಾಡಿ ಯಾವುದೇ ಕಾರಣಕ್ಕೂ ವಿಕಲಚೇತನರನ್ನು ಹೊರಗಡೆ ಕಳಿಸಬೇಡಿ ಎಂದು ತರಾಟೆಗೆ ತೆಗೆದುಕೊಂಡರು. ತಾವೇ ಸ್ವತಃ ಗುಂಟ್ಟುಮುಟ್ಟೆಗಳನ್ನು ಒಳಗಡೆ ಇರಿಸಿದರು. ವಿಕಲಚೇತನರಿಗೆ ಯಾವುದೇ ತೊಂದರೆ ನೀಡಿದಂತೆ ಕ್ರಮಕೈಗೊಳಲಾಗುವುದು ಎಂದು ಭರವಸೆ ನೀಡಿದರು.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 