ಬೆಳಗಾವಿ: ಸಾಂಕ್ರಾಮಿಕ ರೋಗ ಹರಡದಂತೆ ಮುಂಜಾಗೃತ ಕ್ರಮ
ಲೋಕದರ್ಶನ ವರದಿ
ಬೆಳಗಾವಿ 16: ಶಾಸಕ ಅನಿಲ ಬೆನಕೆರವರು ಬೆಳಗಾವಿಯ ಶಿವಾಜಿ ನಗರದಲ್ಲಿ ಸ್ವಾಮಿ ಪೌಂಡೇಶನ್ ಥಾಣೆ, ಮುಂಬೈ ಸಂಸ್ಥಾಪಕ ಅಧ್ಯಕ್ಷರಾದ ಮಹೇಶ ಕದಮ ಇವರ ಸಹಾಯದೊಂದಿಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಬ್ಲಿಚಿಂಗ್ ಪೌಡರ್ ಹರಡುವುದರೊಂದಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅನಿಲ ಬೆನಕೆರವರು ನಗರದಲ್ಲಿ ಅತಿಯಾದ ಮಳೆಯಿಂದ ಅತಿವೃಷ್ಠಿ ಉಂಟಾಗಿ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ಗುನ್ಯಾ ರೋಗಗಳು ಹರಡುವ ಸಂಭವವಿರುವುದರಿಂದ ನಗರದ ಎಲ್ಲ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಂಡು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದರು ಹಾಗೂ ಮುನ್ನೆಚ್ಚರವಾಗಿ ಇಂದು ಸ್ವಾಮಿ ಪೌಂಡೇಶನ್ ಥಾಣೆಯ ಸಂಸ್ಥಾಪಕ ಅಧ್ಯಕ್ಷರೊಂದಿಗೆ ಶಿವಾಜಿ ನಗರದಲ್ಲಿ ಬ್ಲಿಚಿಂಗ ಪೌಡರನ್ನು ಹಾಕುವುದರೊಂದಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ನಗರದ ಎಲ್ಲ ಜನತೆಯು ತಮ್ಮ ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಬ್ಲಿಚಿಂಗ್ ಪೌಡರ ಹರಡಿ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ವಿನಂತಿಸಿದರು.
ಈ ಸಂದರ್ಭದಲ್ಲಿ ಶಾಸಕರೊಂದಿಗೆ ಸ್ವಾಮಿ ಪೌಂಡೇಶನ್ ಥಾಣೆ, ಮುಂಬೈ ಸಂಸ್ಥಾಪಕ ಅಧ್ಯಕ್ಷರಾದ ಮೇಶ ಕದಮ, ಯೊಗೇಶ ಜಾಧವ, ನಿಖಿಲ ಮುಕರ್ುಟೆ, ಮಹೇಶ ಭಾಮಣೆ, ಪ್ರಶಾಂತ ದೇವನ, ತಾಜ ಶೇಖ ಹಾಗೂ ಇತರ ಸ್ಥಳೀಯರು ಉಪಸ್ಥಿತರಿದ್ದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 