ವಿವಿಧ ಜಯಂತಿಗಳ ಪೂರ್ವಭಾವಿ ಸಭೆ; ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ

ವಿವಿಧ ಜಯಂತಿಗಳ ಪೂರ್ವಭಾವಿ ಸಭೆ; ಅಗತ್ಯ ಸಿದ್ಧತೆಗೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಸೂಚನೆ Preliminary meeting for various anniversaries; Additional District Collector Vijayakumar Honakeri in

ಲೋಕದರ್ಶನ ವರದಿ 

ಬೆಳಗಾವಿ 23 : ಸರ್ಕಾರದ ನಿರ್ದೇಶನದಂತೆ ನಾಡಪ್ರಭು ಕೆಂಪೇಗೌಡ ಜಯಂತಿ ಜೂ. 27 ರಂದು ಹಾಗೂ ವಚನ ಪಿತಾಮಹ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಜುಲೈ 2 ರಂದು ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ (ಜೂನ್ 23) ನಡೆದ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾಡಪ್ರಭು ಕೆಂಪೇಗೌಡ ಜಯಂತಿ, ವಚನ ಪಿತಾಮಹ ಫ. ಗು. ಹಳಕಟ್ಟಿಯವರ ಜಯಂತಿಗಳ ಆಚರಣೆಗೆ ಅವಶ್ಯವಿರುವ ಸಿದ್ಧತೆ ಮಾಡಿಕೊಳ್ಳಬೇಕು.

ವೇದಿಕೆ ಕಾರ್ಯಕ್ರಮದಲ್ಲಿ ಉಪನ್ಯಾಸ, ಸಂಗೀತ ಕಾರ್ಯಕ್ರಮ ಸೇರಿದಂತೆ ಇನ್ನಿತರ ಅಗತ್ಯ ಸಿದ್ಧತೆ ಮುಂಚಿತವಾಗಿಯೇ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಜಯಂತಿಗಳ ಆಮಂತ್ರಣ ಪತ್ರಿಕೆ ಮುಂಚಿತವಾಗಿ ಗಣ್ಯರಿಗೆ, ಅಧಿಕಾರಿಗಳು ಮತ್ತು ಸಮಾಜದ ಮುಖಂಡರಿಗೆ ತಲುಪಿಸಬೇಕು ಎಂದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ ಕೆಂಪೇಗೌಡ ಜಯಂತಿ, ವಚನ ಪಿತಾಮಹ ಫ.ಗು. ಹಳಕಟ್ಟಿಯವರ ಜಯಂತಿ ಆಚರಣೆಗೆ ಅಗತ್ಯವಿರುವ ರೂಪರೇಷೆಗಳ ಕುರಿತು ವಿವರಿಸಿದರು. ಸಭೆಯಲ್ಲಿ ಸಮಾಜದ ಮುಖಂಡರಾದ ಬಸವರಾಜ ರೊಟ್ಟಿ, ಮುರಗೇಶ ಶಿವಪೂಜಿ ಸೇರಿದಂತೆ ಅಧಿಕಾರೇತರ ಗಣ್ಯರು ಉಪಸ್ಥಿತರಿದ್ದರು.