ಧಾರವಾಡ.15: ತೀವ್ರತರ ಅತಿಸಾರ ಭೇದಿಯ ನಿಯಂತ್ರಣ ಕುರಿತು ಶಾಲಾ, ಕಾಲೇಜು ಸೇರಿದಂತೆ ನಗರ ಹಾಗೂ ಗ್ರಾಮೀಣ ಭಾಗದ ಪ್ರಮುಖ ಸ್ಥಳಗಳಲ್ಲಿ ತಿಳುವಳಿಕೆ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಮಟ್ಟದ ಟಾಸ್ಕ್ಪೋಸರ್್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಬಿ.ಸಿ. ಸತೀಶ್ ಅವರು ತಿಳಿಸಿದರು.
ಜೂನ್ 3 ರಿಂದ 17 ರ ವರೆಗೆ ಜಿಲ್ಲೆಯಲ್ಲಿ ನಡೆಯುವ ತೀವ್ರತರ ಅತೀಸಾರ ಭೇದಿಯ ನಿಯಂತ್ರಣ ಪಾಕ್ಷಿಕದ ಕುರಿತು ಪೂರ್ವಭಾವಿ ಸಿದ್ಧತಾ ಸಭೆ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಬಿ.ಸಿ. ಸತೀಶ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.
ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಕುಡಿಯುವ ನೀರು ಸರಬರಾಜು ಇಲಾಖೆಗಳು ಪಂಚಾಯತ್ರಾಜ್ ಇಲಾಖೆಯ ಸಹಕಾರದೊಂದಿಗೆ ಪಾಕ್ಷಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಹೇಳಿದರು.
ಓ.ಆರ್.ಎಸ್. ಮತ್ತು ಝಿಂಕ್ ಮಾತ್ರೆಗಳನ್ನು ಮಕ್ಕಳ ವಯಸ್ಸಿಗೆ ಅನುಗುಣವಾಗಿ ವಿತರಿಸಬೇಕು. ಆಶಾ ಕಾರ್ಯಕತರ್ೆಯರು ತಮ್ಮ ವ್ಯಾಪ್ತಿಯ ಪ್ರದೇಶದಲ್ಲಿ ಬರುವ ಪ್ರತಿ ಮಗುವಿಗೆ ಓ.ಆರ್.ಎಸ್. ಪೊಟ್ಟಣ ಹಾಗೂ ಝಿಂಕ್ ಮಾತ್ರೆಗಳು ತಲುಪುವಂತೆ ಮಾಡಬೇಕು. ಮತ್ತು ತಾಯಂದಿರಿಗೆ ತುತರ್ು ಸಂದರ್ಭದಲ್ಲಿ ಓ.ಆರ್.ಎಸ್. ದ್ರಾವಣ ತಯಾರಿಸುವ ಹಾಗೂ ಕುಡಿಸುವ ವಿಧಾನ ಕುರಿತು ತರಬೇತಿ ನೀಡಬೇಕೆಂದು ಅವರು ಹೇಳಿದರು.
ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಆರ್.ಎಂ. ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ ಪಾಕ್ಷಿಕ ಆಚರಣೆಯ ರೂಪುರೇಷೆ ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದಶರ್ಿ ಎ.ಎಂ. ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿದರ್ೆಶಕ ಬಿ.ವಿ. ವರವಟ್ಟಿ ಸೇರಿದಂತೆ ಆರೋಗ್ಯ ಇಲಾಖೆ ವಿವಿಧ ವಿಭಾಗಗಳ ಮುಖ್ಯಸ್ಥರು, ತಾಲೂಕಾ ವೈದ್ಯಾಧಿಕಾರಿಗಳು ಎಸ್.ಡಿ.ಎಮ್. ಕಿಮ್ಸ್ ಸೇರಿದಂತೆ ಪ್ರಮುಖ ಖಾಸಗಿ ಆಸ್ಪತ್ರೆಗಳ ವೈದ್ಯರು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಂ.ಎಲ್. ಹಂಚಾಟೆ ಹಾಗೂ ಇತರರು ಭಾಗವಹಿಸಿದ್ದರು.
ಆರೋಗ್ಯ ಇಲಾಖೆ ಎಲ್.ಎಸ್. ಅಂಬಲಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.