ಮಹಾವಿದ್ಯಾಲಯದಲ್ಲಿ ಪ್ರೇಮಚಂದ್ ಜಯಂತಿ ಆಚರಣೆ
Premchand Jayanti Celebration at the College
ಲೋಕದರ್ಶನ ವರದಿ
ಬೆಳಗಾವಿ, ಜು. 31: ಎಸ್.ಕೆ.ಇ. ಸಂಸ್ಥೆಯ ರಾಣಿ ಪಾರ್ವತಿದೇವಿ ಕಲಾ, ವಾಣಿಜ್ಯ ಹಾಗೂ ಬಿಬಿಎ (ಸ್ವಾಯತ್ತ) ಮಹಾವಿದ್ಯಾಲಯದ ಹಿಂದಿ ವಿಭಾಗದ ವತಿಯಿಂದ ಹಿಂದಿ ಸಾಹಿತ್ಯದ ಶ್ರೇಷ್ಠ ಕಥೆಗಾರ ಹಾಗೂ ಕಾದಂಬರಿಕಾರ ಮುನ್ಷಿ ಪ್ರೇಮಚಂದ್ ಅವರ ಜಯಂತಿಯನ್ನು ಉತ್ಸಾಹದಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಮುನ್ಷಿ ಪ್ರೇಮಚಂದ್ ಅವರ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಿಸಿ ಗೌರವ ಸಲ್ಲಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಭಯ ಪಾಟೀಲ ಮಾತನಾಡಿ, ಪ್ರೇಮಚಂದ್ ಅವರ ಸಾಹಿತ್ಯವು ಸಮಾಜ ಪರಿವರ್ತನೆಗೆ ಮಹತ್ವದ ಕೊಡುಗೆ ನೀಡಿದ್ದು, ಅವರ ಕೃತಿಗಳಲ್ಲಿ ಸಾಮಾಜಿಕ ವಾಸ್ತವ್ಯದ ಪರಿಣಾಮಕಾರಿ ಚಿತ್ರಣ ಕಂಡುಬರುತ್ತದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿವೃತ್ತ ಪ್ರಾಧ್ಯಾಪಕ ವಿಜಯಕುಮಾರ ಪಾಟೀಲ ಅವರು ಪ್ರೇಮಚಂದ್ ಅವರ ಜೀವನ, ಸಾಹಿತ್ಯ ಸಾಧನೆ ಹಾಗೂ ಕೊಡುಗೆಗಳ ಕುರಿತು ಸವಿಸ್ತಾರವಾಗಿ ಮಾತನಾಡಿದರು. ಕಾದಂಬರಿಗಳು, ಕಥೆಗಳು ಹಾಗೂ ಸಾಮಾಜಿಕ ಜಾಗೃತಿಯಿಂದ ಕೂಡಿದ ಬರವಣಿಗೆಯ ಮೂಲಕ ಪ್ರೇಮಚಂದ್ ಅವರು ಹಿಂದಿ ಸಾಹಿತ್ಯದಲ್ಲಿ ’ಉಪನ್ಯಾಸ ಸಮ್ರಾಟ್’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ತಿಳಿಸಿದರು.
ಹಿಂದಿ ವಿಭಾಗದ ಮುಖ್ಯಸ್ಥೆ ಪ್ರೊ. ರೂಪಾ ಜಪ್ತಿಸನದಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರೊ. ಅಜರುದ್ದೀನ್ ತಹಶೀಲ್ದಾರ್ ವಂದಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 