ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಪೂರ್ವ ತಯಾರಿ ಅತ್ಯಗತ್ಯ: ಸೋಮನಾಳ
Preparation is essential to face competitive exams: Somanala
ಮುಧೋಳ 26: ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಪೂರ್ವ ತಯಾರಿ ಅತ್ಯಗತ್ಯವಿದೆ, ಸೂಕ್ತ ತರಬೇತಿಯಿಲ್ಲದೆ ಎಂದೂ ಕೂಡ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಬಾರದು, ಪ್ರತಿಯೊಬ್ಬ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಅಕಾಂಕ್ಷಿಗೂ ಇಚ್ಛಾಶಕ್ತಿ, ಕ್ರಿಯಾ ಶಕ್ತಿ, ಜ್ಞಾನಶಕ್ತಿ ಹಾಗೂ ತನ್ನ ಗುರಿಯೆಡೆಗೆ ಸ್ಪಷ್ಟತೆ ಇರಬೇಕು ಮತ್ತು ವ್ಯಕ್ತಿತ್ವ ವಿಕಸನ ವೃದ್ಧಿಸಲು ಸಾಮಾನ್ಯ ಜ್ಞಾನ ತುಂಬಾ ಇರಬೇಕು, ವಿದ್ಯಾರ್ಥಿ ಗಳು ತಮ್ಮ ಕೆರಿಯರ್ ಬಗ್ಗೆ ಹೆಚ್ಚು ಗಮನಹರಿಸಬೇಕು, ನಿಮ್ಮ ಗುರಿಯೆಡೆಗೆ ಸ್ಪಷ್ಟತೆ ಇರಬೇಕು, ತರಬೇತಿಗಳು ವ್ಯಕ್ತಿತ್ವ ವಿಕಸನವನ್ನು ವೃದ್ಧಿಗೊಳಿಸುತ್ತವೆ, ಅವಕಾಶಗಳನ್ನು ಬೆನ್ನತ್ತಿ ಹೋಗಬೇಕು, ಇಂದು ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣುಮಕ್ಕಳು ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಪಡೆಯುತ್ತಿರುವುದು ಖುಷಿಯ ವಿಚಾರ,'' ಎಂದು ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ (ಆಡಳಿತ) ರಜಿಸ್ಟರ್ ಶಂಕರಗೌಡ ಎಸ್. ಸೋಮನಾಳ ಹೇಳಿದರು.
ಬಾಗಲಕೋಟ ಬಿವ್ಹಿವ್ಹಿ ಸಂಘದ ನಗರದ ಎಸ್.ಆರ್.ಕಂಠಿ ಮಹಾವಿದ್ಯಾಲಯದ ಐಕ್ಯೂಎಸಿ ಅಡಿಯಲ್ಲಿ ಮಂಗಳವಾರ ಕಾಲೇಜಿನ ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶನ ಕೋಶ ಹಾಗೂ ವೃತ್ತಿ ಸಮಾಲೋಚನೆ ಮತ್ತು ಉದ್ಯೋಗ ನಿಯೋಜನೆ ಕೋಶ ಇದರ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿ ಸ್ಥಾನವಹಿಸಿ ಮಾತನಾಡಿ ಇಂದು ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ಆಕಾಂಕ್ಷಿಗಳಿಗೆ ಅಧ್ಯಯನ ನಡೆಸಲು ಸಾಕಷ್ಟು ಪಠ್ಯಪುಸ್ತಕ ಹಾಗೂ ಮಾರ್ಗದರ್ಶನಗಳು ಸಿಗುತ್ತಿವೆ, ಇಂದು ಕಲಿಕಾ ಬೋಧನೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ ಗ್ರಂಥಾಲಯದಲ್ಲಿ ಹೆಚ್ಚು ಪುಸ್ತಕಗಳು ಸಿಗುತ್ತಿವೆ, ಅಲ್ಲಿ ಹೆಚ್ಚು ಸಮಯ ಕಳೆಯಿರಿ, ಯಾವುದನ್ನು ಎಷ್ಟು ಓದಬೇಕೆಂಬ ಯೋಜನಾ ಪಟ್ಟಿ ತಯಾರಿಸಿಕೊಳ್ಳಿರಿ, ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಓದುವ ಮತ್ತು ಬರೆಯುವ ಹವ್ಯಾಸ ರೂಡಿಸಿಕೊಳ್ಳಬೇಕು, ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳ ಕುರಿತು ತಿಳಿದುಕೊಳ್ಳಲು ವೃತ್ತ ಪತ್ರಿಕೆಗಳನ್ನು ತಪ್ಪದೆ ಓದಬೇಕು ಇದರಿಂದ ಅಪಾರವಾದ ಜ್ಞಾನವನ್ನು ಪಡೆದುಕೊಳ್ಳಲು ಸಾದ್ಯ, ಗೂಗಲ್ ಮೂಲಕ ಸಾಕಷ್ಟು ಮಾಹಿತಿಗಳು ತಮಗೆ ಸರಳವಾಗಿ ಸಿಗಲಿವೆ ಇದರಿಂದ ತಮ್ಮ ವ್ಯಕ್ತಿತ್ವವನ್ನು ವಿಕಸನಗೊಳಿಸಿಕೊಳ್ಳಬಹುದು, ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಪಠ್ಯಪುಸ್ತಗಳನ್ನು ಓದುವದರ ಜೊತೆ ಸ್ಪರ್ಧಾತ್ಮಕ ಪರೀಕ್ಷೆ ಹೇಗೆ ಎದುರಿಸಬೇಕೆಂಬುದರ ಕುರಿತು ಸಾಕಷ್ಟು ಪುಸ್ತಕಗಳಿವೆ ಅವುಗಳನ್ನು ಓದಿಕೊಂಡರೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಹೆಚ್ಚು ಸರಳವಾಗಲಿದೆ ಎಂದು ಹೇಳಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಎಂತಹ ಪ್ರಶ್ನೆಗಳು ಬರುತ್ತವೆ ಎಂಬುದರ ಹಲವು ಊದಾಹರಣೆಗಳ ಸಮೇತ ವಿವರಿಸಿದರು.
ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಶ್ನೇಗಳನ್ನು ಕೇಳಿ, ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನು ಬಹುಮಾನವಾಗಿ ನೀಡಿದರು.
ಕಾಲೇಜಿನ ಪ್ರಾಚಾರ್ಯ ಡಾ.ಎಮ್.ಆರ್.ಜರಕುಂಟಿ ಅಧ್ಯಕ್ಷತೆವಹಿಸಿ ಮಾತನಾಡಿ ಬಿಎ, ಬಿಕಾಂ, ಬಿಎಸ್ಸಿ, ಬಿಸಿಎ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳು ಈಗಿನಿಂದಲೇ ಸ್ಪರ್ಧಾತ್ಮಕ ಪರೀಕ್ಷೆ ಹೇಗೆ ಎದುರಿಸಬೇಕೆಂಬುದರ ಕುರಿತು ಅನುಭವಿ ಸಂಪನ್ಮೂಲ ವ್ಯಕ್ತಿಗಳನ್ನು ತರಬೇತಿ ನೀಡಲಾಗುತ್ತದೆ ಕಾರಣ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಐಕ್ಯೂಎಸಿ ಸಂಯೋಜಕ ಪ್ರೊ.ಅಜ್ಜಪ್ಪ ಕಡೂರ ವೇದಿಕೆ ಮೇಲಿದ್ದರು, ವೃತ್ತಿ ಸಮಾಲೋಚನೆ ಮತ್ತು ಉದ್ಯೋಗ ನಿಯೋಜನೆ ಕೋಶದ ಚೇರಮನ್ ಡಾ.ಡಿ.ಆರ್. ಭೂಥಡಾ ಸ್ವಾಗತಿಸಿದರು, ಸ್ಪರ್ಧಾತ್ಮಕ ಪರೀಕ್ಷಾ ಮಾರ್ಗದರ್ಶನ ಕೋಶದ ಚೇರಮನ್ ಡಾ.ಚಿರಂಜಿವಿ ಎಲ್.ಎಮ್ ವಂದಿಸಿದರು, ಡಾ.ಎಮ್.ಕೆ.ಗವಿಮಠ ಅತಿಥಿಗಳನ್ನು ಪರಿಚಯಿಸಿದರು, ಡಾ.ಎಲ್.ಎಮ್.ರಾಠೋಡ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 