ಯಡಿಯೂರ​‍್ಪ ಅಭಿಮಾನೋತ್ಸವಕ್ಕೆ ಸಿದ್ಧತೆ: ಬಳ್ಳಾರಿಯಲ್ಲಿ ಪೂರ್ವಭಾವಿ ಸಭೆ

ಯಡಿಯೂರ​‍್ಪ ಅಭಿಮಾನೋತ್ಸವಕ್ಕೆ ಸಿದ್ಧತೆ: ಬಳ್ಳಾರಿಯಲ್ಲಿ ಪೂರ್ವಭಾವಿ ಸಭೆ Preparations for Yediyurappa's fanfare: Preliminary meeting in Bellary

ಬಳ್ಳಾರಿ 01:  ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರ​‍್ಪ ಅವರ 50 ವರ್ಷಗಳ ರಾಜಕೀಯ ಜೀವನದ ಅಂಗವಾಗಿ ಚಿತ್ರದುರ್ಗದಲ್ಲಿ ಇದೇ ತಿಂಗಳ 9 ರಂದು ನಡೆಯುವ ಅಭಿಮಾನೋತ್ಸವದ ಪೂರ್ವ ಸಿದ್ದತಾ ಸಭೆ ನಡೆಯಿತು.ಸಭೆಯಲ್ಲಿ ಮಾಜಿ ಶಾಸಕ ಗಾಲಿ ಸೋಮಶೇಖರ ರೆಡ್ಡಿ, ಮಾಜಿ ಸಂಸದ ಸಣ್ಣ ಪಕ್ಕೀರ​‍್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ನಾಯ್ಡು, ಮಾಜಿ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷಗೌಡ, ಬಿಚ್ಚುಗಲ್ಲು ಪಂಚಾಕ್ಷರ​‍್ಪ ಸೇರಿದಂತೆ ಹಲವರು ಭಾಗವಹಿಸಿ, ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಅಭಿಮಾನೋತ್ಸವಕ್ಕೆ ಕರೆದುಕೊಂಡು ಹೋಗುವ ಕುರಿತು ಚರ್ಚಿಸಿದರು.ಇದೇ ವೇಳೆ ಜಿಲ್ಲೆಯ ಯಡಿಯೂರ​‍್ಪ ಅಭಿಮಾನಿಗಳು ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರ ಸಭೆಯನ್ನು ನಾಳೆ ಸಂಜೆ 5 ಗಂಟೆಗೆ ನಗರದ ವೀರಶೈವ ವಿದ್ಯಾವರ್ಧಕ ಸಂಘದ ಸಭಾಂಗಣದಲ್ಲಿ ನಡೆಸಲು ನಿರ್ಧರಿಸಲಾಯಿತು.ಸಭೆಯಲ್ಲಿ ಎಸ್‌. ಮಲ್ಲನಗೌಡ, ಶ್ರೀನಿವಾಸ್ ಮೋತ್ಕರ್, ಬಣಾಪುರ ನಾಗರಾಜಗೌಡ, ಕಪ್ಪಗಲ್ಲು ಶಿವರುದ್ರ​‍್ಪ, ಹೊನ್ನನಗೌಡ, ನಡವಿ ವೀರನಗೌಡ, ಹಲಕುಂದಿ ವೀರನಗೌಡ, ಜಡೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.