ಅರ್ಥಪೂರ್ಣ ಸ್ವಾತಂತ್ರ್ಯೋತ್ಸವಕ್ಕೆ ಸಿದ್ಧತೆ
Preparations for a meaningful Independence Day celebration
ದೇವರಹಿಪ್ಪರಗಿ ಆ.7: ಆಗಸ್ಟ್ 15ರಂದು ನಡೆಯಲಿರುವ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣ ಹಾಗೂ ಶಿಸ್ತುಬದ್ಧವಾಗಿ ಆಚರಿಸಲು ತಹಶೀಲ್ದಾರ್ ಬಿರಾದಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಧ್ವಜಾರೋಹಣ, ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಕಾರ್ಯಕ್ರಮಗಳ ಸಿದ್ಧತೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ಕಾರ್ಯಕ್ರಮ ಸ್ಥಳದಲ್ಲಿ ಸ್ವಚ್ಛತೆ, ಕುಡಿಯುವ ನೀರು, ವಿದ್ಯುತ್, ಆಸನ ವ್ಯವಸ್ಥೆ ಹಾಗೂ ಪೊಲೀಸ್ ಬಂದೋಬಸ್ತ್ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸೂಚನೆ ನೀಡಲಾಯಿತು.
ತಹಶೀಲ್ದಾರ್ ಬಿರಾದಾರ್ ಮಾತನಾಡಿ, ಸ್ವಾತಂತ್ರ್ಯೋತ್ಸವವು ಪ್ರತಿಯೊಬ್ಬ ಭಾರತೀಯರ ಹೆಮ್ಮೆಯ ದಿನವಾಗಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಯಾವುದೇ ಲೋಪವಾಗದಂತೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಪ್ರತ್ಯೇಕವಾಗಿ, ಪಟ್ಟಣದ ನೂತನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಕ್ಷಣ ಸೇವೆ ಆರಂಭಿಸಬೇಕು. ಇಲ್ಲವಾದರೆ ಆ.18ರಂದು ಪ್ರತಿಭಟನೆ ನಡೆಸುವುದಾಗಿ ನವ ಕರ್ನಾಟಕ ಸೇನೆ ತಾಲೂಕು ಅಧ್ಯಕ್ಷ ಹಸನ್ ನದಾಫ್ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಬಡೆಕೊಳ್ಳಮಠದ ಬಳಿ ಅಪಘಾತ ತಡೆಗೆ ತಾತ್ಕಾಲಿಕ ಕ್ರಮ: ಮಳೆಗಾಲ ಬಳಿಕ ಶಾಶ್ವತ ಕಾಮಗಾರಿ
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ 