ಶಿಸ್ತು ಸಂಭ್ರಮದ ಗಣರಾಜ್ಯೋತ್ಸವ ಆಚರಣೆಗೆ ಪೂರ್ವ ಸಿದ್ಧತೆ

ಗದಗ 08: ಯಾವುದೇ ಲೋಪ ಇಲ್ಲದೇ ಗದಗ-ಬೆಟಗೇರಿ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಶಿಸ್ತು ಹಾಗೂ ಸಂಭ್ರಮದಿಂದ ಆಚರಿಸಲು ಅಗತ್ಯದ ಕ್ರಮಕ್ಕೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೂಚನೆ ನೀಡಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಣರಾಜ್ಯೋತ್ಸವ ರಾಷ್ಟ್ರೀಯ ಹಬ್ಬವಾಗಿದ್ದು ಎಲ್ಲ ಅಧಿಕಾರಿಗಳು ತಮಗೆ ವಹಿಸಿರುವ ಜವಾಬ್ದಾರಿಗಳನ್ನು ದಕ್ಷತೆಯಿಂದ ನಿರ್ವಹಿಸಬೇಕು. ಸಮಾರಂಭವನ್ನು ವ್ಯವಸ್ಥಿತವಾಗಿ ಜವಾಬ್ದಾರಿಯಿಂದ ಅಧಿಕಾರಿಗಳು ಹಾಗೂ ವಿವಿಧ ಸಮಿತಿಗಳು ಸಮನ್ವಯತೆಯಿಂದ ಕರ್ತವ್ಯ ನಿಭಾಯಿಸಬೇಕು. ಒಟ್ಟಾರೆಯಾಗಿ ಈ ಬಾರಿ ಪ್ರಜಾರಾಜ್ಯೋತ್ಸವ ಸಮಾರಂಭವನ್ನು ಸಂಭ್ರಮದಿಂದ ಆಚರಿಸಲು ಹಾಗೂ ಎಲ್ಲ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ನಿರ್ದೇಶನ ನೀಡಿದರು. ಗಣರಾಜ್ಯೋತ್ಸವ ದಿನದಂದು ಜರುಗುವ ಪಥ ಸಂಚಲನ ದಳಗಳ ಆಯ್ಕೆ, ಸಚಿವರ ಸಂದೇಶ , ಬಹುಮಾನ ವಿತರಣೆ , ಸಾಧಕರಿಗೆ ಸನ್ಮಾನ, ಆಮಂತ್ರಣ ಪತ್ರಿಕೆ ಮುದ್ರಣ, ಪ್ರಮುಖ ವೃತ್ತಗಳ ದೀಪಾಲಂಕಾರ, ಕ್ರೀಡಾಂಗಣ ಹಾಗೂ ಸಾಯಂಕಾಲ ಜರುಗುವ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ. ಸಮಾರಂಭವನ್ನು ಯಶಸ್ವಿಯಾಗಿ ಜರುಗಿಸಲು ಇಲಾಖೆಗಳ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ವಿವರಿಸಿದರು. ಸಾರ್ವಜನಿಕರಲ್ಲಿ ಗಣರಾಜ್ಯೋತ್ಸವದ ಕುರಿತು ಜಾಗೃತಿ ಮೂಡಿಸಲು ದಿ. 26ರಂದು ಮುಂಜಾನೆ 7-30 ಗಂಟೆಗೆ ಶಾಲಾ-ಕಾಲೇಜುಗಳಲ್ಲಿ ಧ್ವಜಾರೋಹಣ ನಂತರ ವಿದ್ಯಾರ್ಥಿಗಳಿಂದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದವರೆಗೆ ಪ್ರಭಾತಫೇರಿ ಹಮ್ಮಿಕೊಳ್ಳುವಂತೆ ಸಾರ್ವಜನಿಕ ಹಾಗೂ ಪ.ಪೂ.ಶಿಕ್ಷಣ ಇಲಾಖೆ ಉಪನಿರ್ದೇಶಕರು ಕ್ರಮಜರುಗಿಸಬೇಕು. ಸರ್ಕಾರಿ ಕಚೇರಿ ಹಾಗೂ ಸಂಘ ಸಂಸ್ಥೆಗಳವರು ಧ್ವಜಾರೋಹಣ ಕಾರ್ಯ ಮುಗಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ಮುಂಜಾನೆ 8.45ಕ್ಕೂ ಮುಂಚೆ ಆಗಮಿಸಬೇಕು.ಸಮಾರಂಭದಲ್ಲಿ ಪಥ ಸಂಚಲನ, ಗೌರವರಕ್ಷೆ ನೀಡುವ ವಿವಿಧ ದಳಗಳು ಪೂರ್ವಭಾವಿ ತಾಲೀಮು ನಡೆಸಲು, ಸಮಾರಂಭದಂದು ಸನ್ಮಾನಗೊಳ್ಳಬೇಕಾದವರ ಆಯ್ಕೆಗೆ ಸಮಿತಿ ಕ್ರಮ ಜರುಗಿಸಲು, ಸಾಂಸ್ಕೃತಿಕ ಕಾರ್ಯಕ್ರಮಗಳ ಎಪರ್ಾಡು ಅಲ್ಲದೆ, ಜ. 26 ರಂದು ಮುಂಜಾನೆ 7-30 ಗಂಟೆಗೆ ಎಲ್ಲ ಶಾಲೆ, ಕಾಲೇಜು, 8 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಅಲ್ಲಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಇದರಲ್ಲಿ ಭಾಗವಹಿಸಬೇಕು ಎಂದ ಅಪರ ಜಿಲ್ಲಾಧಿಕಾರಿಗಳು ಸರ್ವ ಇಲಾಖೆ, ಶಾಲಾ ಕಾಲೇಜುಗಳ ವಿದ್ಯಾಥರ್ಿ ಮತ್ತು ಶಿಕ್ಷಕ ವೃಂದವದವರು, ವಿವಿಧ ಸಂಘ ಸಂಸ್ಥಗಳವರು ತಪ್ಪದೇ ಭಾಗವಹಿಸಿ ಸಮಾರಂಭ ಯಶಸ್ವಿಗೊಳಿಸಬೇಕು ಎಂದರು. ಉಪ ವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ಜಿ.ಪಂ. ಉಪ ಕಾರ್ಯದರ್ಶಿ ಬಿ ಕಲ್ಲೇಶ, ಗದಗ ತಹಶೀಲ್ದಾರ ಶ್ರೀನಿವಾಸಮೂರ್ತಿ ಕುಲಕರ್ಣಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮುಖ್ಯಸ್ಥರುಗಳು ಸಭೆಯಲ್ಲಿ ಭಾಗವಹಿಸಿದ್ದರು.