ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಆಚರಿಸಲು ಸಿದ್ದತೆಗೆ ಕ್ರಮ: ಗೋಣೆಣ್ಣವರ
Preparations to celebrate Dr. BR Ambedkar Jayanti in a grand manner: Gonenvara
ಶಿಗ್ಗಾವಿ 03 : ತಾಲೂಕ ಮಟ್ಟದಲ್ಲಿ ಎ.5ರಂದು ಡಾ.ಬಾಬು ಜಗಜೀವನ ರಾಮ್ ಅವರ 119ನೇ ಜಯಂತಿ ಹಾಗೂ ಎ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 135 ನೇ ಜಯಂತಿ ಕಾರ್ಯಕ್ರಮವನ್ನು ಸಂಘಟಿತವಾಗಿ ಅದ್ಧೂರಿಯಿಂದ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಹಸೀಲ್ದಾರ ಯಲ್ಲಪ್ಪ ಗೋಣೆಣ್ಣವರ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ತಹಸೀಲ್ದಾರ ಕಾರ್ಯಾಲಯದ ಸಭಾಂಗಣದಲ್ಲಿ ನಡೆದ ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರುಪ್ರತಿ ವರ್ಷದಂತೆ ಈ ವರ್ಷವೂ ಎಲ್ಲ ಸರ್ಕಾರಿ ಕಚೇರಿಗಳಲ್ಲಿ 10 ಗಂಟೆಗೆ ಮತ್ತು ತಹಸೀಲ್ದಾರ ಕಾರ್ಯಾಲಯದಲ್ಲಿ 11 ಗಂಟೆಗೆ ಕಾರ್ಯಕ್ರಮ ನಡೆಸಲಾಗುವುದು, ಅಧಿಕಾರಿಗಳು ತಪ್ಪದೆ ಕಾರ್ಯಕ್ರಮದಲ್ಲಿ ಹಾಜರಿರಬೇಕು.
ಎ.14ರಂದು ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯಲ್ಲಿ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಅಂಬೇಡ್ಕರ್ ಮೆರವಣಿಗೆ ಸಂದರ್ಭದಲ್ಲಿ ಪಾಲ್ಗೊಂಡು ಗೌರವ ಸಲ್ಲಿಸಬೇಕು. ಖಾಸಗಿ ಶಾಲೆಗಳಲ್ಲಿ ಜಗಜೀವನರಾಂ ಜಯಂತಿ ಆಚರಣೆಯನ್ನು ಮಾಡದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ ಸಂಘಟಕರಿಗೆ ಭರವಸೆ ನೀಡಿದರು.
ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಆಯೋಜನೆ ಮತ್ತು ಪ್ರಾಥಮಿಕ, ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಭಾಷಣ, ಪ್ರಬಂಧ ಸ್ಪರ್ಧೆ ಆಯೋಜಿಸಿ, ವಿಜೇತ ತಲಾ ಮೂರು ವಿದ್ಯಾರ್ಥಿಗಳಿಗೆ ಪ್ರಶಸ್ತಿಯ ಜೊತೆಗೆ ಸನ್ಮಾನಿಸಿ ಗೌರವಿಸಲು ನಿರ್ಣಯ ಕೈಗೊಳ್ಳಲಾಯಿತು.ಸಭೆಯಲ್ಲಿ ಸಿಪಿಐ ವಿ ಎಸ್ ಹಿರೇಮಠ. ತಾಪಂ ಇಓ ಮಂಜುನಾಥ ಸಾಳುಂಕೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ, ಶಿವಾನಂದ ಮ್ಯಾಗೇರಿ, ದಲಿತ ಮುಖಂಡರಾದ ಅಶೋಕ ಕಾಳೆ, ಬಸವರಾಜ ಕಟ್ಟೀಮನಿ, ಕರೆಪ್ಪ ಕಟ್ಟಿಮನಿ, ಮಂಜುನಾಥ ಬ್ಯಾಹಟ್ಟಿ, ಶಶಿಧರ ಹೊನ್ನಣ್ಣನವರ, ಹನುಮಂತ ಬಂಡಿವಡ್ಡರ, ಬಸವರಾಜ ಜೇಕಿನಕಟ್ಟಿ, ಅಶೋಕ ಓಲೇಕಾರ, ಸೇರಿದಂತೆ ತಾಲೂಕಾಡಳಿತದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 