ಜುಲೈ 29ರಂದು ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಅರ್ಥಪೂರ್ಣ ಆಚರಣೆಗೆ ಸಿದ್ಧತೆ: ವಿಶ್ವಜೀತ್ ಮೆಹತಾ
Preparations underway for the meaningful celebration of Shivasharana Hadapada Appanna Jayanti on Jul
ಬಳ್ಳಾರಿ 20: ಜುಲೈ 29ರಂದು ನಡೆಯಲಿರುವ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣ ಹಾಗೂ ಶಿಸ್ತುಬದ್ಧವಾಗಿ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಚೇರಿಯ ತಹಶೀಲ್ದಾರ್ ವಿಶ್ವಜೀತ್ ಮೆಹತಾ ಹೇಳಿದರು.
ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೊ ಸಭಾಂಗಣದಲ್ಲಿ ಸೋಮವಾರ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಇಲಾಖೆಗಳು ಹಾಗೂ ಸಮಾಜದ ಮುಖಂಡರು ಸಹಕಾರ ನೀಡಬೇಕು ಎಂದು ಅವರು ಮನವಿ ಮಾಡಿದರು.
ಜುಲೈ 29ರಂದು ಬೆಳಿಗ್ಗೆ 9.30ಕ್ಕೆ ಮುನಿಸಿಪಲ್ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆ ಗಡಿಗಿ ಚೆನ್ನಪ್ಪ ವೃತ್ತ, ಸ್ಟೇಷನ್ ರಸ್ತೆ, ಹೆಚ್.ಆರ್. ಗವಿಯಪ್ಪ ವೃತ್ತ ಮಾರ್ಗವಾಗಿ ಡಾ. ಜೊಳದರಾಶಿ ದೊಡ್ಡನಗೌಡ ರಂಗಮಂದಿರದ ಸಭಾಂಗಣಕ್ಕೆ ತಲುಪಲಿದೆ.
ಬಳಿಕ ಬೆಳಿಗ್ಗೆ 11 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಜಯಂತಿ ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಳ್ಳಲಿವೆ. ಮೆರವಣಿಗೆ ಮಾರ್ಗದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಸ್ವಚ್ಛತೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಲಾಯಿತು.
ಬ್ಯಾನರ್ ಅಳವಡಿಕೆಗೆ ಮಹಾನಗರ ಪಾಲಿಕೆಯಿಂದ ಕಡ್ಡಾಯ ಅನುಮತಿ ಪಡೆಯಬೇಕು. ಪಟಾಕಿ ಸಿಡಿಸುವುದು ಹಾಗೂ ಅತಿಯಾದ ಶಬ್ದದ ಧ್ವನಿವರ್ಧಕಗಳ ಬಳಕೆಗೆ ಅವಕಾಶ ಇರುವುದಿಲ್ಲ. ಶಿವಶರಣ ಹಡಪದ ಅಪ್ಪಣ್ಣ ಅವರ ಜೀವನ, ತತ್ವ ಹಾಗೂ ವಚನಗಳ ಕುರಿತು ವಿಶೇಷ ಉಪನ್ಯಾಸ ಮತ್ತು ವಚನ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 