ಎಪ್ರೀಲ್ 23 ರಿಂದ ಮೇ 22 ವರೆಗೆ ಉಚಿತ ಕಾಲು ಬಾಯಿ ರೋಗಕ್ಕೆ ಲಸಿಕಾ ಅಭಿಯಾನ
Preparatory meeting
ಲೋಕದರ್ಶನ ವರದಿ
ಪೂರ್ವ ಸಿದ್ದತಾ ಸಭೆ
ಬಾಗಲಕೋಟೆ 22: ಜಿಲ್ಲೆಯ ಜಾನುವಾರುಗಳಿಗೆ ಎಪ್ರೀಲ್ 23 ರಿಂದ ಮೇ 22 ವರೆಗೆ 9ನೇ ಸುತ್ತಿನ ಜಾನುವಾರುಗಳ ಕಾಲು ಬಾಯಿ ರೋಗಕ್ಕೆ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ 9ನೇ ಸುತ್ತಿನ ಜಾನುವಾರುಗಳ ಕಾಲು ಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿಯ ಪೂರ್ವಭಾವಿ ಸಿದ್ಧತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಲಸಿಕಾ ಕಾರ್ಯಕ್ರಮದ ಜೊತೆಗೆ ಜಾನುವಾರುಗಳಿಗೆ ಚರ್ಮಗಂಟು ರೋಗದ ಲಸಿಕೆ ಮತ್ತು ನಾಯಿಗಳಿಗೆ ರೇಬಿಸ್ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಲು ತಿಳಿಸಿದರು. ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ.ಎಸ್.ಎಚ್.ಕರಡಿಗುಡ್ಡ, ಲಸಿಕಾ ಕಾರ್ಯಕ್ರಮದ ಸಿದ್ದತೆ ಕುರಿತು ವಿವರಣೆ ನೀಡಿದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಪ್ರತಿ 6 ತಿಂಗಳಿಗೊಮ್ಮೆ ಕಾಲು ಬಾಯಿ ರೋಗದ ಲಸಿಕೆ ಹಾಕಿಸಿಕೊಳ್ಳುವುದು ಕಡ್ಡಾಯವಾಗಿದೆ. ಜಾನುವಾರುಗಳಿಗೆ ಈ ರೋಗ ಬಂದ ನಂತರ ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುತ್ತದೆ.
ಸದರಿ ಲಸಿಕೆ ಹಾಕಿಸಿ ರೋಗ ನಿಯಂತ್ರಿಸಲು ಮತ್ತು ಕಾಲು ಬಾಯಿ ರೋಗ ಮುಕ್ತ ಜಿಲ್ಲೆ ಹಾಗೂ ರಾಜ್ಯವನ್ನಾಗಿ ಮಾಡಲು ಇದೊಂದು ಉತ್ತಮ ಮಾರ್ಗ ಎಂದು ತಿಳಿಸಿದರು. 20ನೇ ಜಾನುವಾರು ಗಣತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 15,28,158 ಜಾನುವಾರುಗಳಿದ್ದು, ಸದ್ಯ 11750 ಡೋಜ್ ಲಸಿಕೆ ಲಭ್ಯವಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 3938 ಬ್ಲಾಕ್ಗಳನ್ನು ಮಾಡಲಾಗಿದೆ. ಇಲಾಖೆಯ ಹಾಗೂ ಇಲಾಖೇತರ ಸೇರಿ ಒಟ್ಟು 524 ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಲಸಿಕೆದಾರರು ಮನೆ ಬಾಗಿಲಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ರೈತ-ಬಾಂಧವರು ಲಸಿಕಾ ಸಿಬ್ಬಂದಿಗಳಿಗೆ ಸಹಕರಿಸಿ, ತಪ್ಪದೇ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲುಬಾಯಿ ರೋಗದ ಲಸಿಕಾ ಕಾರ್ಯಕ್ರಮದ ಪ್ರಚಾರ ಸಾಮಗ್ರಿಗಳನ್ನು ಬಿಡುಗಡೆ ಮಾಡಲಾಯಿತು. ಸಭೆಯಲ್ಲಿ ಕೆ.ಎಂ.ಎಫ್ನ ಅಧಿಕಾರಿಗಳು, ಜಿಲ್ಲಾ ನಿರ್ವಹಣಾ ಸಮಿತಿ ಸದಸ್ಯ ಅಧಿಕಾರಿಗಳು ಹಾಗೂ ಆಯಾ ತಾಲೂಕಿನ ಮುಖ್ಯ ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 