ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆ

ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆ Preparatory meeting for the 110th birth anniversary of Devaraja Arasu

ಧಾರವಾಡ 12: ಸಹಯೋಗದಲ್ಲಿ ಆಗಸ್ಟ್‌ 20 ರಂದು ಬೆಳಿಗ್ಗೆ 11 ಗಂಟೆಗೆ ಡಿ. ದೇವರಾಜ ಅರಸು  ಜನ್ಮ ದಿನಾಚರಣೆಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. 

ಅವರು ಇಂದು (ಆ.12) ರಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಭವನದಲ್ಲಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.  

ಹಿಂದುಳಿದ ವರ್ಗಗಳ ಏಳಿಗೆಗೆ ಅವರು ನೀಡಿದ ಕೊಡುಗೆಗಳು ಚಿರಸ್ಮರಣೀಯ. ಸಮಾಜದ ಎಲ್ಲಾ ವರ್ಗದ ಜನರನ್ನು ಒಳಗೊಂಡು, ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು. 

ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ  ಎಸ್‌.ಎಸ್‌.ಎಲ್‌.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಗುವುದು ಎಂದು ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ    , ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ವಿವಿಧ ಸಮಾಜಗಳ ಮುಖಂಡರು ಹಾಗೂ ಇನ್ನಿತರರು ಸಭೆಯಲ್ಲಿ ಉಪಸ್ಥಿತರಿದ್ದರು.