12 ನೇ ಅಂತಾರಾಷ್ಟ್ರಿಯ ಯೋಗ ದಿನಾಚರಣೆಯ ನಿಮಿತ್ಯ ಪೂರ್ವಭಾವಿ ಸಭೆ

  12 ನೇ ಅಂತಾರಾಷ್ಟ್ರಿಯ ಯೋಗ ದಿನಾಚರಣೆಯ ನಿಮಿತ್ಯ ಪೂರ್ವಭಾವಿ ಸಭೆ Preparatory meeting for the 12th International Yoga Day

ಲೋಕದರ್ಶನ ವರದಿ 

ಗದಗ  15 :  12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು  ಜೂನ್ 21 ರಂದು ನಗರದ ಕೆ. ಎಚ್‌. ಪಾಟೀಲ ಕ್ರೀಡಾಂಗಣದಲ್ಲಿ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ತಿಳಿಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯುಷ ಇಲಾಖೆಯ ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ಜರುಗಿದ ಪೂರ್ವಭಾವಿ  ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯ ರಕ್ಷಣೆಗಾಗಿ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು.

ಇಂದಿನ ಒತ್ತಡಮಯ ಜೀವನಶೈಲಿಯಿಂದಾಗಿ ಪ್ರತಿಯೊಬ್ಬರಿಗೂ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಉಂಟಾಗುವುದು ಸರ್ವೇ ಸಾಮಾನ್ಯವಾಗಿದೆ. ಆದಕಾರಣ ನೌಕರರು ಹಾಗೂ ಸಾರ್ವಜನಿಕರು ಮಾನಸಿಕ ಹಾಗೂ ದೈಹಿಕ ಸದೃಢತೆಗೆ ತಮ್ಮ ದೈನಂದಿನ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳಬೇಕು.  ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಯೋಗ ದಿನಾಚರಣೆಯನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು. ಕೇವಲ ಒಂದು ದಿನದ ಆಚರಣೆಯಾಗದೆ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹಾಗೂ ನೆನಪಿನ ಶಕ್ತಿಯನ್ನು ಉತ್ತಮಪಡಿಸಲು ಯೋಗವನ್ನು ನಿರಂತರವಾಗಿ ಅಭ್ಯಾಸ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.