7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದ ಪೂರ್ವಭಾವಿ ಸಭೆ ಕಾಲುಬಾಯಿ ರೋಗ ಲಸಿಕಾ ಅಭಿಯಾನ ಯಶಸ್ವಿಗೊಳಿಸಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್
ಗದಗ 17: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಏಪ್ರಿಲ್ 21 ರಿಂದ ಜೂನ್ 4 ರವರೆಗೆ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿ0ಾನ ನಡೆ0ುಲಿದ್ದು ಅಭಿಯಾನದ ಯಶಸ್ಸಿಗೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 7ನೇ ಸುತ್ತಿನ ರಾಷ್ಟ್ರೀಯ ಕಾಲುಬಾಯಿ ರೋಗ ನಿಯಂತ್ರಣ ಕಾರ್ಯಕ್ರಮದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಾನುವಾರುಗಳು ದೇಶದ ಆಸ್ತಿಯಾಗಿದ್ದು ಜಾನುವಾರುಗಳ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ, ಕಾಲುಬಾಯಿ ರೋಗವನ್ನು ನಿಯಂತ್ರಿಸಿ ನಿರ್ಮೂಲನೆ ಮಾಡಲು ಈ ರೋಗದ ವಿರುದ್ಧ ಜಾನುವಾರುಗಳಿಗೆ ಲಸಿಕೆ ಹಾಕಿಸುವುದು ಕಡ್ಡಾಯವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಶುಪಾಲಕರು ಹಾಗೂ ರೈತ ಬಾಂಧವರು ತಮ್ಮ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ. ಎಚ್.ನಾಗರಾಜ ಅವರು ಮಾತನಾಡಿ ಕಾಲುಬಾಯಿ ರೋಗವು ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಗದಗ ಜಿಲ್ಲೆಗೆ ಕಾಲುಬಾಯಿ ರೋಗ ಲಸಿಕೆಯು ಕೇಂದ್ರ ಸರ್ಕಾರದಿಂದ ಸರಬರಾಜಾಗಿದ್ದು ಈ ರೋಗದ ವಿರುದ್ಧ ದನ, ಎಮ್ಮೆ ಮತ್ತು ಕರುಗಳಿಗೆ ಉಚಿತವಾಗಿ ಏಪ್ರಿಲ್ 21 ರಿಂದ ಜೂನ್ 4 ರವರೆಗೆ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಲಸಿಕೆದಾರರು ಮನೆ ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಲಸಿಕಾ ಅಭಿಯಾನದಲ್ಲಿ 196 ಲಸಿಕಾ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಕೆಎಂಎಫ್, ನಗರಸಭೆ, ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಅಭಿಯಾನದ ಯಶಸ್ಸಿಗೆ ಸಕಲ ಸಿದ್ಧತೆಗೆ ಕ್ರಮ ವಹಿಸಲಾಗಿದೆ ಎಂದು ಸಭೆಗೆ ವಿವರಿಸಿದರು.
ಇದೇ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನದ ಕುರಿತು ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸಹಾಯಕ ನಿರ್ದೇಶಕರುಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಜಾನುವಾರು ರೋಗಗಳ ಲಸಿಕಾ ನಿರ್ವಹಣಾ ಸಮಿತಿ ಸದಸ್ಯರು ಹಾಜರಿದ್ದರು.