ರೇಣುಕಾಚಾರ್ಯ ಜಯಂತಿ ಕುರಿತು ಪೂರ್ವಭಾವಿ ಸಭೆ
Preparatory meeting on Renukacharya Jayanti
ಲೋಕದರ್ಶನ ವರದಿ
ಗದಗ 20 : ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 1 ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ವ್ಯವಸ್ಥಿತವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ರೇಣುಕಾಚಾರ್ಯ ಜಯಂತಿ ಕುರಿತು ಜರುಗಿದ ಪೂರ್ವ ಸಿದ್ದಾತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೇಣುಕಾಚಾರ್ಯ ಜಯಂತಿಯನ್ನು ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ಅದ್ಯಕ್ಷತೆಯಲ್ಲಿ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು. ಶಾಲಾ, ಕಾಲೇಜು, ಗ್ರಾಮ ಪಂಚಾಯಿತಿಲ್ಲಿ ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲು ಕ್ರಮ ವಹಿಸಬೇಕು. ಎಸ್.ಎಸ್.ಎಲ್.ಸಿ, ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಸಾಧಕರಿಗೆ , ಹಿರಿಯರಿಗೆ ಸನ್ಮಾನ ನಡೆಸುವ ಕಾರ್ಯಕ್ರಮ ಜರುಗಲಿದೆ ಎಂದರು. ಶಿಷ್ಠಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಜಯಂತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಶೋಭೆ ತರಬೇಕು. ರೇಣುಕಾಚಾರ್ಯ ಜಯಂತಿ ಕುರಿತು ಅಧ್ಯಯನ ಮಾಡಿದವರಿಂದ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ. ಒಟ್ಟಾರೆಯಾಗಿ ರೇಣುಕಾರ್ಚಾ ಜಯಂತಿಯನ್ನು ಸುವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಭೆಯಲ್ಲಿ ವೇದಿಕೆ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ , ಬ್ಯಾನರ್ ಅಳವಡಿಕೆ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಸಮಾಜದ ಹಿರಿಯರು, ಗಣ್ಯರು, ಮುಖಂಡರು, ಮಹಿಳೆಯರು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ರಾಜಕುಮಾರ ಸೋಪಡ್ಲ , ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 